ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಎಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ್ ಆದಾಲತ್‌ನಲ್ಲಿ ರಾಜಿಸಂಧಾನದ ಮೂಲಕ ಬಗೆಹರಿಸಬಹುದಾದ ಹಲವು ಪ್ರಕಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ನ್ಯಾಯಾಧೀಶರಾದ ಬಿ.ಪಾರ್ವತಮ್ಮ ತಿಳಿಸಿದ್ದಾರೆ.ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಂತೆ ಲೋಕ್ ಅದಾಲತ್‌ನಲ್ಲಿ ಮೋಟಾರು ವಾಹನಗಳ ಪ್ರಕರಣಗಳು, ಸಿವಿಲ್ ಪ್ರಕರಣಗಳು, ರಾಜಿ ಆಗಬಹುದಾದ ಕ್ರಿಮಿನಲ್ ಹಾಗೂ ಚೆಕ್ ಬೌನ್ಸ್ ಪ್ರಕರಣಗಳನ್ನು ತೆಗೆದುಕೊಂಡು ಆಯಾಯಾ ನ್ಯಾಯಾಲಯಗಳಲ್ಲಿ ಜನತಾ ನ್ಯಾಯಾಲಯ ಮಾಡಿ ಹಲವು ಪ್ರಕರಣ ಇತ್ಯರ್ಥ ಪಡಿಸಲಾಗಿದೆ.
ನ್ಯಾಯಾಲಯದಲ್ಲಿ ಒಟ್ಟು 7113 ಪ್ರಕರಣಗಳು ಬಾಕಿ ಇದ್ದು, ಇದರಲ್ಲಿ ಸುಮಾರು 596 ಪ್ರಕರಣ ರಾಜಿ ಸಂಧಾನಕ್ಕೆ ಸ್ವೀಕಾರ ಮಾಡಲಾಗಿತ್ತು. ಸುಮಾರು 336 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 5518 ಕೇಸುಗಳನ್ನು ವಕೀಲರ, ಪಕ್ಷಗಾರರ ಹಾಗೂ ಎಲ್ಲಾ ನ್ಯಾಯಾಧೀಶರ ಸಹಯೋಗದಲ್ಲಿ ಮುಕ್ತಾಯಗೊಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ಡೆಂಘೀ ಮಾರಣಾಂತಿಕ, ಸಾಂಕ್ರಾಮಿಕ ರೋಗ: ಡಾ.ಅಜಿತ್ಕೆ.ಆರ್.ಪೇಟೆ: ಡೆಂಘೀ ಮಾರಣಾಂತಿಕ ಸಾಂಕ್ರಾಮಿಕ ರೋಗವಾಗಿದೆ. ಜ್ವರಕ್ಕೆ ಕಾರಣವಾದ ಈಡೀಸ್ ಸೊಳ್ಳೆ ನಿಯಂತ್ರಿಸಲು ನಮ್ಮ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅಜಿತ್ ಹೇಳಿದರು.ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಡೆಂಘೀ ರೋಗ ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡೆಂಘೀ ಚಿಕಿತ್ಸೆಗೆ ಇದುವರೆಗೂ ಯಾವುದೇ ನಿರ್ಧಿಷ್ಟ ಔಷಧಿಯಿಲ್ಲ. ಆದ ಕಾರಣ ಸಾರ್ವಜನಿಕರು ತಮ್ಮ ವಾಸ ಸ್ಥಳದ ಸುತ್ತ ಸೊಳ್ಳೆಗಳ ಸಂತಾನೊತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಿ ರೋಗ ಮೂಲವನ್ನು ತಡೆಗಟ್ಟಬೇಕು ಎಂದರು.ನಮ್ಮ ಸುತ್ತಲಿನ ಪರಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು. ಅಮೂಲ್ಯವಾದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈಧ್ಯಾಧಿಕಾರಿ ಡಾ.ಶಶಿಧರ್, ಹಿರಿಯ ಆರೋಗ್ಯ ಪರಿವೀಕ್ಷಕ ಸತೀಶ್, ದೇವಾನಂದ್ ಮತ್ತಿತರರು ಭಾಗವಹಿಸಿದ್ದರು.