ವಿಜಯಪುರ ಜಿಲ್ಲಾದ್ಯಂತ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ಗೆ ಕಕ್ಷಿದಾರರ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣಗಳಲ್ಲಿ 16,678 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ. ಈ ಮೂಲಕ ರಾಜ್ಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥದಲ್ಲಿ ವಿಜಯಪುರ ಜಿಲ್ಲೆ 2ನೇ ಸ್ಥಾನದಲ್ಲಿದೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾದ್ಯಂತ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ಗೆ ಕಕ್ಷಿದಾರರ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣಗಳಲ್ಲಿ 16,678 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ. ಈ ಮೂಲಕ ರಾಜ್ಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥದಲ್ಲಿ ವಿಜಯಪುರ ಜಿಲ್ಲೆ 2ನೇ ಸ್ಥಾನದಲ್ಲಿದೆ.ಲೋಕ ಅದಾಲತ್‌ನಲ್ಲಿ ಆಸ್ತಿ ವಿಭಾಗ ಕೋರಿದ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು ರಾಜೀಯಾಗಬಹುದ ಕ್ರಿಮಿನಲ್ ಪ್ರಕರಣಗಳು ಹಾಗೂ ಅಮಲ್ಮಾರಿ ಪ್ರಕರಣಗಳು ಸೇರಿವೆ.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ತಿಳಿವಳಿಕೆ ನೀಡಿ, ಕಕ್ಷಿದಾರರು ಬಹಳ ವರ್ಷ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣ ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡು ಉಳಿಯುತ್ತದೆ. ಆದ್ದರಿಂದ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಸಾಯಬಣ್ಣ ಹಾಗರಗಿ ಮಾತನಾಡಿ, ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಂಡು ಪರಸ್ಪರ ಸೌರ್ಹಾದತೆಯಿಂದ ಸಮಾಜದಲ್ಲಿ ಜೀವನ ಸಾಗಿಸಬೇಕೆಂದರು. ಜಿಲ್ಲೆಯಲ್ಲಿ 21 ಜೋಡಿಗಳು ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ವೈವಾಹಿಕ ಜೀವನ ಮುನ್ನಡೆಸಲು ಒಪ್ಪಿದರು.ಜನತಾ ನ್ಯಾಯಾಲಯದ ಯಶಸ್ಸಿಗೆ ಎಲ್ಲ ಅಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ವಕೀಲರು. ಕಕ್ಷಿದಾರರು ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಉತ್ತಮವಾಗಿ ಸಹಕರಿಸಿದರು ಎಂದು ತಿಳಿಸಿದ್ದಾರೆ.