ಸಾರಾಂಶ
ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿಯಿಂದ ಬಸವಪ್ರಭು, ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ರಾಯಚೂರು
ಲೋಕಸಭೆ ಚುನಾವಣೆ ಹಿನ್ನೆಲೆ ರಾಯಚೂರು ಕ್ಷೇತ್ರಕ್ಕೆ ಮಂಗಳವಾರ ಎರಡು ನಾಮಪತ್ರ ಸಲ್ಲಿಕೆಯಾಗಿದ್ದು, ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ರಾಮಲಿಂಗಪ್ಪ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿಯಿಂದ ಬಸವಪ್ರಭು ನಾಮಪತ್ರ ಸಲ್ಲಿಸಿದರು.ಸ್ಥಳೀಯ ಡಿಸಿ ಕಚೇರಿಗೆ ಆಗಮಿಸಿದ ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕರಿಗೆ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಪ್ರೊಬೇಶನರಿ ಐಎಎಸ್ ಅಧಿಕಾರಿ ಸಾಹಿತ್ಯ ಆಲದಕಟ್ಟಿ, ಸಹಾಯಕ ಚುನಾವಣಾಧಿಕಾರಿ ಅಶೋಕ ದುಡಗುಂಟಿ, ಉಮೇದುದಾರರ ಸೂಚಕರು ಇದ್ದರು.
ನಾಮಪತ್ರ ಸಲ್ಲಿಕೆಗೂ ಪೂರ್ವದಲ್ಲಿ ನಗರದ ಭಗತ್ ಸಿಂಗ್ ವೃತ್ತದಲ್ಲಿ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ರಾಮಲಿಂಗಪ್ಪ ನೂರಾರು ಕಾರ್ಯಕರ್ತರು, ಜನ ಬೆಂಬಲಿಗರೊಂದಿಗೆ ಸಭೆ ನಡೆಸಿದರು. ಈ ವೇಳೆ ರಾಜ್ಯ ಸೆಕ್ರೆಟೇರಿಯಟ್ ಸದಸ್ಯ ಕೆ.ಸೋಮಶೇಖರ್ ಹಾಗೂ ಅಭ್ಯರ್ಥಿ ರಾಮಲಿಂಗಪ್ಪ ಹಾಗೂ ಯಾದಗಿರಿ ಜಿಲ್ಲಾ ಸಂಘಟನಾ ಸಮಿತಿ ಜಿಲ್ಲಾ ಕಾರ್ಯದರ್ಶಿ ಶರಣಗೌಡ ಗೂಗಲ್ ಮಾತನಾಡಿದರು. ರಾಯಚೂರು ಜಿಲ್ಲಾ ಸಂಘಟನಾ ಸಮಿತಿ ಸದಸ್ಯರಾದ ವೀರೇಶ್.ಎನ್.ಎಸ್ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಸುಡುಬಿಸಿಲಿನಲ್ಲಿ ಕಾರ್ಯಕರ್ತರು ವಿವಿಧ ಬಿತ್ತಿ ಪತ್ರಗಳು, ಕೆಂಬಾವುಟಗಳು, ಘೋಷಣೆ ಪತ್ರಗಳನ್ನು ಹಿಡಿದು ಸಾಗಿದರು. ಮೆರವಣಿಗೆಯ ಮೂಲಕ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.ಪಕ್ಷದ ರಾಜ್ಯ ಸಮಿತಿ ಸದಸ್ಯ ಕೆ.ಸೋಮಶೇಖರ್ ಯಾದಗಿರಿ, ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಶರಣ್ ಗೌಡ ಗೂಗಲ್, ಜಿಲ್ಲಾ ಕಾರ್ಯದರ್ಶಿ ಡಾ. ಚಂದ್ರ ಗಿರೀಶ್, ಸಮಿತಿ ಸದಸ್ಯರಾದ ಶರಣಪ್ಪ ಉದ್ಬಾಳ, ಚನ್ನಬಸವ ಜಾನೇಕಲ್, ಮಹೇಶ್ ಚೀಕಲಪರ್ವಿ, ರಾಮಣ್ಣ ಎಂ., ಅಣ್ಣಪ್ಪ ಎಸ್. ಹಾಗು ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸಿದ್ದರು.