ಚುನಾವಣಾ ಪ್ರಚಾರದಲ್ಲಿ ಸಿಎಂ, ಡಿಸಿಎಂ ಭಾಗಿ

| Published : Apr 09 2024, 12:45 AM IST / Updated: Apr 09 2024, 10:55 AM IST

DK shivakumar And siddaramaiah

ಸಾರಾಂಶ

ಏ. 13 ರಂದು ಬೆಳಗ್ಗೆ 11ಕ್ಕೆ ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬೂತಾಳೆ ಮೈದಾನ, ಮಧ್ಯಾಹ್ನ 2 ಗಂಟೆಗೆ ಹುಣಸೂರಿನ ಪುರಭವನ ಮತ್ತು ಸಂಜೆ 5 ಗಂಟೆಗೆ ಪಿರಿಯಾಪಟ್ಟಣದ ಕಾಂಗ್ರೆಸ್ ಕಚೇರಿ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸುವರು.

 ಮೈಸೂರು :  ಮೈಸೂರು ನಗರ, ಜಿಲ್ಲೆ ಮತ್ತು ಕೊಡಗು ಜಿಲ್ಲಾ ಕಾಂಗ್ರೆಸ್ಸಮಿತಿಯು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಚುನಾವಣಾ ಪ್ರಚಾರದ ವೇಳಾಪಟ್ಟಿ ಬಿಡುಗಡೆಗೊಳಿಸಿದೆ.

ಏ. 13 ರಂದು ಬೆಳಗ್ಗೆ 11ಕ್ಕೆ ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬೂತಾಳೆ ಮೈದಾನ, ಮಧ್ಯಾಹ್ನ 2 ಗಂಟೆಗೆ ಹುಣಸೂರಿನ ಪುರಭವನ ಮತ್ತು ಸಂಜೆ 5 ಗಂಟೆಗೆ ಪಿರಿಯಾಪಟ್ಟಣದ ಕಾಂಗ್ರೆಸ್ ಕಚೇರಿ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸುವರು.

ಏ. 14ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ, ಸಂಜೆ 5 ಗಂಟೆಗೆ ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಅಜೀಜ್ಸೇಠ್ ಕಾಲೋನಿ ಎದುರಿನ ಮೈದಾನದಲ್ಲಿ ಈ ಇಬ್ಬರೂ ಚುನಾವಣಾ ಪ್ರಚಾರ ನಡೆಸುವರು.

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಏ. 12 ರಂದು ಮಧ್ಯಾಹ್ನ 2 ಗಂಟೆಗೆ ಕಳಲೆ ಗೇಟ್ಬಳಿ, ಸಂಜೆ 6 ಗಂಟೆಗೆ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಸಂತೇಮಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ಸೇಠ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ಮೊದಲಾದವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವರು.