ಸಾರಾಂಶ
ಲೋಕಸಭಾ ಚುನಾವಣಾ ಸಂಬಂಧ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಸ್ವೀಪ್ ಅಡಿಯಲ್ಲಿ ಮತದಾರರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಈ ಮೂವರನ್ನು ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಮೈಸೂರು
ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೈಸೂರು ಜಿಲ್ಲೆಯ ಚುನಾವಣಾ ರಾಯಭಾರಿ ಆಗಿ ಮಾಡೆಲಿಂಗ್ ಕ್ಷೇತ್ರದ ತನಿಷ್ಕಾ ಮೂರ್ತಿ, ಅಂತಾರಾಷ್ಟ್ರೀಯ ವನ್ಯಜೀವಿ ಛಾಯಚಿತ್ರಗಾರರಾದ ಬಿ.ಎಸ್. ಕೃಪಾಕರ್ ಹಾಗೂ ಕೆ. ಸೇನಾನಿ ಅವರನ್ನು ನೇಮಿಸಲಾಗಿದೆ.ಲೋಕಸಭಾ ಚುನಾವಣಾ ಸಂಬಂಧ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಸ್ವೀಪ್ ಅಡಿಯಲ್ಲಿ ಮತದಾರರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಈ ಮೂವರನ್ನು ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ. ಇವರು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳುವ ಮತದಾನ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮತದಾರರಲ್ಲಿ ಅರಿವು ಮೂಡಿಸಲು ಕೈ ಜೋಡಿಸಲಿದ್ದಾರೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಜಿಪಂ ಸಿಇಒ ಕೆ.ಎಂ. ಗಾಯತ್ರಿ ತಿಳಿಸಿದ್ದಾರೆ.