ಸಾರಾಂಶ
ಹಾವೇರಿ: ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವ ಮೂಲಕ ಚುನಾವಣಾ ಹಬ್ಬದಲ್ಲಿ ಭಾಗವಹಿಸಬೇಕು ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪ್ರದೀಪ್ ಗಣೇಶ್ಕರ್ ಹೇಳಿದರು.ತಾಲೂಕಿನ ದೇವಿಹೊಸೂರ ಗ್ರಾಮ ಪಂಚಾಯಿತಿಯಲ್ಲಿ ವಲಸೆ ಯಾಕ್ರಿ ನಮ್ಮೂರಲ್ಲೆ ಉದ್ಯೋಗಖಾತ್ರಿ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಿ ಸ್ವೀಪ್ ಸಮಿತಿ ವತಿಯಿಂದ ಕೂಲಿಕಾರರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಯುವಕರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ದೇಶದ ಅಭಿವೃದ್ಧಿ ಕುರಿತಾದ ಪರಿಕಲ್ಪನೆಗಳು ಸಾಕಾರಗೊಳ್ಳಲು ಮತದಾನದ ಹಕ್ಕು ಚಲಾಯಿಸುವುದು ಅವಶ್ಯಕ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗಬಾರದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಸಾತೇನಹಳ್ಳಿ, ಮಾಹಿತಿ ಶಿಕ್ಷಣ ಸಂಯೋಜಕ ಗಿರೀಶ ಬೆನ್ನೂರ, ಗ್ರಾಪಂ ಸಿಬ್ಬಂದಿ ಪಾಲ್ಗೊಂಡಿದ್ದರು.
ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ: ರಾಣಿಬೆನ್ನೂರು ತಾಲೂಕಿನ ಕರೂರ ಗ್ರಾಮದ ನರೇಗಾ ಯೋಜನೆಯಡಿ ಕೈಗೊಂಡಿರುವ ದೊಡ್ಡಕೆರೆ ಕಾಮಗಾರಿಯನ್ನು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಪರಶುರಾಮ ಪೂಜಾರ ವೀಕ್ಷಿಸಿದರು.ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಯಶಸ್ಸಿಗಾಗಿ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತಗಟ್ಟೆಗೆ ಹೋಗಿ ತಪ್ಪದೇ ಮತದಾನ ಮಾಡಬೇಕು ಎಂದರು.ಸಂವಿಧಾನ ನಮಗೆ ನೀಡಿರುವ ಪವಿತ್ರವಾದ ಮತದಾನದ ಹಕ್ಕನ್ನು ಆಸೆ ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸುವ ಮೂಲಕ ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜ್ಯೋತಿ ಕಮ್ಮಾರ ಪ್ರತಿಜ್ಞಾವಿಧಿ ಬೋಧಿಸಿದರು.ತಾಲೂಕು ಐಇಸಿ ಸಂಯೋಜಕ ದಿಂಗಾಲೇಶ್ವರ ಅಂಗೂರ, ರೇಷ್ಮಾ, ಪರಶುರಾಮ ಅಂಬಿಗೇರ, ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಸುಮಾರು 68 ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.