ಲೋಕಸಭಾ ಚುನಾವಣೆ: ಕೆಆರ್‌ಎಸ್‌ ಪಕ್ಷದಿಂದ ಅಭ್ಯರ್ಥಿಗಳಿಗೆ ಆಹ್ವಾನ

| Published : Jan 05 2024, 01:45 AM IST

ಸಾರಾಂಶ

ಮುಂದೆ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಜ.6 ಮತ್ತು 7 ರಂದು ಕೆಆರ್‌ಎಸ್‌ ಪಕ್ಷದ ಬೆಂಗಳೂರಿನ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಈಗಾಗಲೇ ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸ್ಪರ್ಧಿಸಲು ಆಸಕ್ತಿಯುಳ್ಳವರು ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲೂ ಸ್ಪರ್ಧಿಗಳನ್ನು ಕಣಕಿಳಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ನಿರ್ಧರಿಸಿದ್ದು, ಆಸಕ್ತ ಸ್ಪರ್ಧಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿದೆ .ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವಮೂರ್ತಿ, ಕೆಆರ್‌ಎಸ್ ಪಕ್ಷವು ಪಕ್ಷದ ಆರಂಭದಿಂದಲೂ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿ, ನಿರಂತರವಾಗಿ ಜನರನ್ನು ತಲುಪುವ ಕೆಲಸ ಮಾಡುತ್ತ ಬಂದಿದೆ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲೂ 195 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಿದೆ. ಮುಂದೆ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಜ.6 ಮತ್ತು 7 ರಂದು ಪಕ್ಷದ ಬೆಂಗಳೂರಿನ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಈಗಾಗಲೇ ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸ್ಪರ್ಧಿಸಲು ಆಸಕ್ತಿಯುಳ್ಳವರು ಸಂದರ್ಶನಕ್ಕೆ ಹಾಜರಾಗಬಹುದು ಎಂದಿದ್ದಾರೆ.

ಆಕಾಂಕ್ಷಿಗಳು ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿರಬಾರದು. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರಬಾರದು. ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿರಬೇಕು. ಜನಪರ ಕಾಳಜಿ, ಸಂವಿಧಾನದಲ್ಲಿ ನಂಬಿಕೆ, ರಾಜ್ಯದ ಅಭಿವೃದ್ಧಿಯ ಚಿಂತನೆಯುಳ್ಳವರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ 9611720802 ಸಂಪರ್ಕಿಸಬಹುದು ಎಂದರು.ಸಂದರ್ಶನದ ನಂತರ ರಾಜ್ಯ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭಾವ್ಯ ಅಭ್ಯಾರ್ಥಿಗಳೆಂದು ಘೋಷಿಸಲಿದೆ ಎಂದು ಮಾಹಿತಿ ನೀಡಿದರು.ಪಕ್ಷದ ದಕ್ಷಿಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಕಾರ್ಯದರ್ಶಿಗಳಾದ ಲಿಂಗರಾಜು, ಕೆ.ಆರ್.ಪ್ರಭುಸ್ವಾಮಿ, ನಂಜುಂಡ, ಶಂಬುಲಿಂಗ ಸುದ್ದಿಗೋಷ್ಠಿಯಲ್ಲಿ ಇದ್ದರು.