ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಏ.26ರಂದು ನಡೆಯುವ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಮಡಿವಾಳ ಸಮುದಾಯ ಬೆಂಬಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಸಂಘಟನಾ ಉಸ್ತುವಾರಿ ಹಾಗೂ ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಹಳುವಾಡಿ ವೆಂಕಟೇಶ್ ಮನವಿ ಮಾಡಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಬನ್ನಂಗಾಡಿ, ಕನ್ನಂಬಾಡಿ, ಕಟ್ಟೇರಿ, ಕಾಳೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಡಿವಾಳ ಸಮುದಾಯದವರನ್ನು ಭೇಟಿ ಮಾಡಿ ಚುನಾವಣಾ ಪ್ರಚಾರ ನಡೆಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿವೆ. ಇತ್ತೀಚಿನ ದಿನಗಳಲ್ಲಿ ಮಳೆ ಬೆಳೆ ಇಲ್ಲದೆ ಬರ ಆವರಿಸಿಕೊಂಡು ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು, ಹತಾಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರದ ಪಂಚ ಭಾಗ್ಯಗಳಾದ ಹೆಣ್ಣು ಮಕ್ಕಳಿಗೆ ಬಸ್ ಫ್ರೀ, ಮಹಿಳೆಯರಿಗೆ 2000 ಮಾಸಿಕ ವೇತನ, ಹತ್ತು ಕೆಜಿ ಅಕ್ಕಿ, ವಿದ್ಯಾರ್ಥಿಗಳಿಗೆ 3000 ವೇತನ, 200 ಯೂನಿಟ್ ವಿದ್ಯುತ್ ಫ್ರೀ, ಮಾಡಿ ಬಡ ಕುಟುಂಬಗಳಿಗೆ ಆಶ್ರಯವಾಗಿದೆ. ಇದು ಅಲ್ಲದೇ, ಕೇಂದ್ರದಲ್ಲಿ ಕಾಂಗ್ರೆಸ್ ಹಾಗೂ ಘಟಾಬಂಧನ್ ಸರ್ಕಾರ ಆಡಳಿತಕ್ಕೆ ಬಂದರೆ ಮಹಿಳೆಯರಿಗೆ 1 ಲಕ್ಷ ಫ್ರೀ, ಅಲ್ಲದೆ 25 ಗ್ಯಾರಂಟಿ ಜನಸಾಮಾನ್ಯರಿಗೆ ನೀಡುತ್ತೇವೆ. ಈ ನಿಟ್ಟಿನಲ್ಲಿ ಬಡವರ ಪಕ್ಷವಾದ ಕಾಂಗ್ರೆಸ್ ಪಕ್ಷಕ್ಕೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಅವರನ್ನು ಅತಿಹೆಚ್ಚಿನ ಮತದಲ್ಲಿ ಜಯಶೀಲರನ್ನಾಗಿ ಮಾಡಿ ಎಂದು ಮನವಿ ಮಾಡಿದರು.
ಕೆಪಿಸಿಸಿ ಹಿಂದುಳಿದ ವರ್ಗದ ವಿಭಾಗದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಹಿಂದುಳಿದ ವರ್ಗದ ಸಮುದಾಯ ಬೆಂಬಲಿಸುವಂತೆ ಮನವಿ ಮಾಡಿದರು.;Resize=(128,128))
;Resize=(128,128))
;Resize=(128,128))
;Resize=(128,128))