ಲೋಕಸಭಾ ಚುನಾವಣೆ: ಪೊಲೀಸ್ ಅಧಿಕಾರಿಗಳ ವರ್ಗಾವಣೆ

| Published : Feb 04 2024, 01:30 AM IST

ಸಾರಾಂಶ

ಚನ್ನಪಟ್ಟಣ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಬಿರುಸುಗೊಂಡಿದ್ದು, ತಾಲೂಕಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ಹಾಗೂ ಪಿಎಸ್‌ಐಗಳನ್ನು ವರ್ಗಾವಣೆ ಮಾಡಲಾಗಿದೆ.

ಚನ್ನಪಟ್ಟಣ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಬಿರುಸುಗೊಂಡಿದ್ದು, ತಾಲೂಕಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ಹಾಗೂ ಪಿಎಸ್‌ಐಗಳನ್ನು ವರ್ಗಾವಣೆ ಮಾಡಲಾಗಿದೆ.

ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಗರ ವೃತ್ತ ನಿರೀಕ್ಷಕಿ ಶೋಭಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ರವಿಕಿರಣ್‌ ಅವರನ್ನು ನೇಮಕ ಮಾಡಿದ್ದು, ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಇನ್ನು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಟಿ.ಟಿ. ಕೃಷ್ಣ ಅವರನ್ನು ಕೋಲಾರ ಜಿಲ್ಲೆಯ ಕೆಜಿಎಫ್‌ಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಮುತ್ತುರಾಜ್ ಅವರನ್ನು ನೇಮಕ ಮಾಡಲಾಗಿದೆ.

ಅಕ್ಕೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಅವರನ್ನು ತುಮಕೂರು ಜಿಲ್ಲೆಯ ಹುಳಿಯಾರ್‌ಗೆ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ತುಮಕೂರು ಮೂಲದ ಸುನಿತಾದೇವಿ ಅವರನ್ನು ನಿಯೋಜಿಸಲಾಗಿದೆ. ಇದೇ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಅತ್ತಿಬೆಲೆಗೆ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಗಾಯತ್ರಿ ಅವರನ್ನು ನಿಯೋಜಿಸಲಾಗಿದೆ.

ನಗರ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಶುಭಾಂಬಿಕ ಅವರನ್ನು ಗೌರಿಬಿದನೂರು ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಚಿಕ್ಕಬಳ್ಳಾಪುರದ ರಂಗನಾಥ್ ಅವರನ್ನು ನಿಯೋಜಿಸಲಾಗಿದೆ. ಇದೇ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಆಗಿದ್ದ ಪಾಂಡು ಅವರನ್ನು ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಬಿಡದಿಯ ನರಸಿಂಹ ಅವರನ್ನು ನೇಮಕ ಮಾಡಲಾಗಿದೆ.

ಪೂರ್ವ ಪೊಲೀಸ್‌ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾದೇಶ್ ಅವರನ್ನು ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜು ಅವರನ್ನು ಆನೇಕಲ್‌ಗೆ ವರ್ಗಾವಣೆ ಮಾಡಲಾಗಿದೆ.

ಪೊಟೋ೩ಸಿಪಿಟಿ3: ಶೋಭಾ

ಪೊಟೋ೩ಸಿಪಿಟಿ4: ಪಾಂಡು