ಲೋಕಸಭಾ ಚುನಾವಣೆ ದೇಶದ ಭವಿಷ್ಯ ನಿರ್ಧರಿಸಲಿದೆ

| Published : Apr 16 2024, 01:05 AM IST / Updated: Apr 16 2024, 01:00 PM IST

ಸಾರಾಂಶ

  ಭವಿಷ್ಯದ ಭಾರತಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಬಿಜೆಪಿ ಬೆಂಬಲಿಸಲು ಜನತೆ ಮುಂದಾಗಬೇಕು. ಅದಕ್ಕಾಗಿ ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಕರೆ ನೀಡಿದರು.

 ದೇವರಹಿಪ್ಪರಗಿ : ಭವಿಷ್ಯದ ಭಾರತಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಬಿಜೆಪಿ ಬೆಂಬಲಿಸಲು ಜನತೆ ಮುಂದಾಗಬೇಕು. ಅದಕ್ಕಾಗಿ ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಕರೆ ನೀಡಿದರು.

ಕಲಕೇರಿ ಗ್ರಾಮದಲ್ಲಿ ಬಿಜೆಪಿಯಿಂದ ಭಾನುವಾರ ಕಲಕೇರಿ ಹಾಗೂ ಹುಣಶ್ಯಾಳ ಜಿಪಂ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಹಾಗೂ ಪೇಜ್ ಪ್ರಮುಖರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಲೋಕಸಭಾ ಚುನಾವಣೆ ದೇಶದ ಭವಿಷ್ಯ ನಿರ್ಧರಿಸಲಿದೆ. ನಮ್ಮ ಗುರಿ ಮಾತ್ರ ನರೇಂದ್ರ ಮೋದಿ ಪ್ರಧಾನಿ ಆಗಬೇಕಿದ್ದು, ವಿಜಯಪುರ ಜಿಲ್ಲೆಯ ಸಂಸದರಾಗಿ ರಮೇಶ ಜಿಗಜಿಣಗಿ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು. ಅದಕ್ಕಾಗಿ ಪ್ರತಿಯೊಬ್ಬ ಕಾರ್ಯಕರ್ತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನೆ ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಬೇಕು. ಜತೆಗೆ ರಾಜ್ಯ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳು ವಿಫಲವಾಗಿದ್ದು, 200 ಯುನಿಟ್‌ ಉಚಿತ ವಿದ್ಯುತ್, 5ಕೆಜಿ ಅಕ್ಕಿ ನೀಡುವ ಭರವಸೆಗಳು ಹಾಗೆ ಉಳಿದಿವೆ. ಗ್ಯಾರಂಟಿ ಯೋಜನೆಗಳಿಗಾಗಿ ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವಂತೆ ಮನವಿ ಮಾಡಿದರು.

ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮಾತನಾಡಿ, ಬಿಜೆಪಿಯಿಂದ ಸುಮಾರು 400ಕ್ಕೂ ಹೆಚ್ಚು ಬಿಜೆಪಿ ಸಂಸದರನ್ನು ಗೆಲ್ಲಿಸುವ ಗುರಿ ಹೊಂದಲಾಗಿದೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ರಮೇಶ ಜಿಗಜಿಣಗಿ ಅವರಿಗೆ ಬೀಳಲಿವೆ. ಅದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕಿದ್ದು, ಈ ಬಾರಿ ಜೆಡಿಎಸ್ ಪಕ್ಷ ಬಿಜೆಪಿಯನ್ನು ಬೆಂಬಲಿಸಿದ್ದರಿಂದ ಆನೆ ಬಲ ಬಂದಂತಾಗಿದೆ ಎಂದರು.

ವಿಪ ಮಾಜಿ ಸದಸ್ಯ ಅರುಣ ಶಹಾಪುರ, ವಿಧಾನ ಪರಿಷತ್‌ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಮುಖಂಡರಾದ ಡಾ.ಬಸನಗೌಡ ಪಾಟೀಲ(ನಾಗರಹಾಳ), ಪ್ರಭುಗೌಡ ಬಿರಾದಾರ ಅಸ್ಕಿ, ಸಿದ್ದು ಬುಳ್ಳಾ, ರಮೇಶ ಮಸಿಬಿನಾಳ ಸೇರಿದಂತೆ ಹಲವರು ಮಾತನಾಡಿದರು. ಈ ವೇಳೆ ಕ್ಷೇತ್ರದ ಸಹ ಸಂಚಾಲಕಿ ಶಿಲ್ಪಾ ಕುದರಗೊಂಡ, ಮಂಡಲದ ಪ್ರ.ಕಾ ಮಹಾಂತೇಶ ಬಿರಾದಾರ, ಭೀಮನಗೌಡ ಲಚ್ಯಾಣ, ಮುಖಂಡರಾದ ಸುರೇಶ ಬಿರಾದಾರ, ಸಂಗಾರಡ್ಡಿ ದೇಸಾಯಿ, ವೀರಪ್ಪ ಝಳಕಿ, ಶರಣಪ್ಪ ಮೋಪಗಾರ, ಸೋಮಶೇಖರ ಸಜ್ಜನ, ಅಪ್ಪು ದೇಸಾಯಿ, ಶರಣು ಕೌದಿ, ಪ್ರಕಾಶ ಯರನಾಳ, ಸುಧಾಕರ ಅಡಕಿ, ವಿಶ್ವನಾಥ ಸಬರದ, ಭರತೇಶ ಪಾಕಿ, ಶ್ರೀಪಾಲ ಪಾಕಿ, ಕಿರಣ ದೇಸಾಯಿ ಸೇರಿದಂತೆ ಬಿಜೆಪಿ ಜಿಲ್ಲಾ ಘಟಕದ ಹಾಗೂ ಮಂಡಲದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಲಕೇರಿ ಹಾಗೂ ಹುಣಶ್ಯಾಳ ಜಿಪಂ ವ್ಯಾಪ್ತಿಯ ಕಾರ್ಯಕರ್ತರು ಭಾಗವಹಿಸಿದ್ದರು.

ಸರ್ವ ಸಮಾಜದ ಶ್ರೇಯೋಭಿವೃದ್ಧಿಗೆ ಸಂಸದನಾಗಿ ಕೆಲಸ ಮಾಡಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ಸುಮಾರು ₹ 1ಲಕ್ಷ ಕೋಟಿ ಗೆ ಹೆಚ್ಚು ಅನುದಾನ ತಂದಿದ್ದೇನೆ. ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವನಾಗಿ ಪ್ರತಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಕೆಲಸ, ಗ್ರಾಮೀಣ ಹಾಗೂ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ, ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ 10 ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ.

- ರಮೇಶ ಜಿಗಜಿಣಗಿ, ಬಿಜೆಪಿ ಅಭ್ಯರ್ಥಿ.