ಸಾರಾಂಶ
ಗೋಕಾಕ: ಪಿಂಚಣಿ ಯೋಜನೆಗಳ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ಗೋಕಾಕ ತಹಸೀಲ್ದಾರ್ ಕಚೇರಿ ಮೇಲೆ ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಗೋಕಾಕ: ಪಿಂಚಣಿ ಯೋಜನೆಗಳ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ಗೋಕಾಕ ತಹಸೀಲ್ದಾರ್ ಕಚೇರಿ ಮೇಲೆ ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದ್ದು, 30ಕ್ಕೂ ಅಧಿಕ ಲೋಕಾಯುಕ್ತ ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅನರ್ಹರಿಗೆ ಸಂಧ್ಯಾಸುರಕ್ಷಾ, ಅಂಗವಿಕಲ ಯೋಜನೆ ಮಂಜೂರು ಮಾಡಿದ ಆರೋಪದ ಮೇಲೆ ಗ್ರೇಡ್-2 ತಹಸೀಲ್ದಾರ್ ಶ್ರೀಕಾಂತ್ ಬೆಟಗೇರಿ, ಉಪ ತಹಸೀಲ್ದಾರ್ ಸಾಗರ ಕಟ್ಟಿಮನಿ ಹಾಗೂ ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ಸೇರಿ ಹಲವು ಅಧಿಕಾರಿಗಳ ಮನೆಗಳ ಮೇಲೆಯೂ ಲೋಕಾಯುಕ್ತ ಪೊಲೀಸರಿಂದ ದಾಳಿ ನಡೆದಿದೆ.ಲೋಕಾಯುಕ್ತ ಎಸ್‌ಪಿ ಹನುಮಂತರಾಯ ಮಾರ್ಗದರ್ಶನದಲ್ಲಿ ಮತ್ತು ಡಿವೈಎಸ್‌ಪಿ ಬಿ.ಎಸ್.ಪಾಟೀಲ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ. ಅಕ್ರಮವಾಗಿ ಎಸ್‌ಎಸ್‌ಐ ಪಿಂಚಣಿಗಳ ಮಂಜೂರಾತಿ ನೀಡಿದ ಹಿನ್ನಲೆಯಲ್ಲಿ ಈ ವಿಚಾರಣೆ ನಡೆದಿದೆ. ಸಂಜೆಯವರೆಗೂ ಲೋಕಾಯುಕ್ತ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿತ್ತು.