ರೇಣುಕಾ ಮನೆ ಮೇಲೆ ಲೋಕಾ ದಾಳಿ: ಅಕ್ರಮ ಸಂಪತ್ತು ಪತ್ತೆ

| Published : May 16 2025, 01:45 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ನಗರದ ಸೇಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ನಿವಾಸ ಹಾಗೂ ಸೊಲಾಪುರದ ಕೆ.ಎಚ್.ಬಿ ಪ್ರದೇಶದಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ನಗರದ ಸೇಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ನಿವಾಸ ಹಾಗೂ ಸೊಲಾಪುರದ ಕೆ.ಎಚ್.ಬಿ ಪ್ರದೇಶದಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ.

ಈ ವೇಳೆ ಅಧಿಕಾರಿ ರೇಣುಕಾ ಸಾತರ್ಲೆ ಮನೆಯಲ್ಲಿ ಲಾಕರ್‌ನಲ್ಲಿದ್ದ 250 ಗ್ರಾಂ ಚಿನ್ನಾಭರಣ, 2 ಕೆ.ಜಿ ಬೆಳ್ಳಿ ಆಭರಣಗಳು ಹಾಗೂ ದಾಖಲೆ ಇಲ್ಲದ ₹10 ಲಕ್ಷ ನಗದು ಹಣ ಪತ್ತೆಯಾಗಿದೆ. ಅಲ್ಲದೆ ₹20 ರಿಂದ ₹ 50 ಸಾವಿರ ಬೆಲೆ ಬಾಳುವ 50ಕ್ಕೂ ಅಧಿಕ ಸನ್‌ಗ್ಲಾಸ್‌ಗಳು ಹಾಗೂ ವಾಚ್‌ಗಳು ಸಹ ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ಅಪಾರ್ಟ್ಮೆಂಟ್ ಹಾಗೂ ವಿಜಯಪುರ ನಗರದಲ್ಲಿನ ಬಿಲ್ಡಿಂಗ್, ಮನೆ ಸೇರಿದಂತೆ ಹಲವು ದಾಖಲೆಗಳನ್ನು ಲೋಕಾಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇ‍ಳೆ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ, ಡಿವೈಎಸ್ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸಪೆಕ್ಟರ್‌ಗಳು ಮತ್ತು ಸಿಬ್ಬಂದಿಗಳು ಕಾರ್ಯಚಾರಣೆಯಲ್ಲಿ ತೊಡಗಿದ್ದಾರೆ.