ಸಾರಾಂಶ
ತುಮಕೂರು : ಆದಾಯಕ್ಕಿಂತ ಮೀರಿ ಆಸ್ತಿ ಗಳಿಕೆ ಆರೋಪದಡಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಐಎಡಿಬಿ ಅಪರ ನಿರ್ದೇಶಕ ಮುದ್ದಕುಮಾರ್ ಅವರ ತುಮಕೂರಿನ ಮನೆ ಸೇರಿದಂತೆ ವಿವಿಧೆಡೆ ಲೋಕಾಯುಕ್ತರ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತುಮಕೂರಿನ ಬನಶಂಕರಿ ಬಳಿಯಿರುವ ನಿವಾಸ ಸೇರಿದಂತೆ ಒಟ್ಟು ಆರು ಕಡೆ ಲೋಕಾಯುಕ್ತ ದಾಳಿ. ನಡೆದಿದೆ. ತುಮಕೂರು ನಗರದ ಬನಶಂಕರಿಯಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿರುವ ಫಾರಂಹೌಸ್, ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಫ್ಯಾಕ್ಟರಿ, (ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕ) ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತುಮಕೂರು ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ದಾಳಇ ನಡೆದಿದ್ದು ಲೋಕಾಯುಕ್ತ ಡಿವೈಎಸ್ಪಿ ಬಿ.ಉಮಾಶಂಕರ್, ರಾಮಕೃಷ್ಣಯ್ಯ ಇನ್ಸ್ಪೆಕ್ಟರ್ ಗಳಾದ ಶಿವರುದ್ರಪ್ಪ ಮೇಟಿ, ಮಹಮ್ಮದ್ ಸಲೀಂ, ಸೇರಿದಂತೆ 30 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.