ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರ ಮೇಲೆ ಲೋಕಾಯುಕ್ತ ದಾಳಿ

| Published : Oct 31 2023, 01:16 AM IST

ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರ ಮೇಲೆ ಲೋಕಾಯುಕ್ತ ದಾಳಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜೇಶ್ ಬೆಳ್ಕೆರೆ ಅವರ ಅದಾಯ ಮೀರಿದ ಆಸ್ತಿಪಾಸ್ತಿಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಕುಂದಾಪುರ ನಗರದ ಎಲ್.ಐ.ಸಿ. ರಸ್ತೆ ಸಮೀಪದ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ರಾಜೇಶ್ ಬೆಳ್ಕೆರೆ ಅವರ ಅದಾಯ ಮೀರಿದ ಆಸ್ತಿಪಾಸ್ತಿಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ. ಸೋಮವಾರ ಬೆಳಗ್ಗೆ ಕುಂದಾಪುರದ ಎಲ್ಐಸಿ ರಸ್ತೆ ಸಮೀಪದ ಸಲೀಂ ಅಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ತಡರಾತ್ರಿಯವರೆಗೂ ಪರಿಶೀಲನೆ ನಡೆಸುತ್ತಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ರಾಜೇಶ್ ಬೆಳ್ಕೆರೆ ಹಲವು ವರ್ಷದಿಂದ ಕುಂದಾಪುರದಲ್ಲಿ ನೆಲೆಸಿದ್ದಾರೆ. ಏಕಕಾಲದಲ್ಲಿ ಕುಂದಾಪುರ ಮನೆ. ಉಡುಪಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಮತ್ತು ಮೂಲತಃ ಅಂಕೋಲದಲ್ಲಿರುವ ಅವರ ಮನೆಯಲ್ಲಿಯಬ ತಪಾಸಣೆ ನಡೆಯುತ್ತಿದೆ. ಲೋಕಾಯುಕ್ತ ಎಸ್ಪಿ ಸೈಮನ್, ಡಿವೈಎಸ್ಪಿ ಕೆಪಿ ಪ್ರಕಾಶ್, ಇನ್ಸ್ಪೆಕ್ಟರ್ ಮಂಜುನಾಥ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸುತ್ತಿದೆ‌.