ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಮನೆಗೆ ಲೋಕಾ ದಾಳಿ

| Published : Nov 22 2024, 01:19 AM IST / Updated: Nov 22 2024, 05:04 AM IST

ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಮನೆಗೆ ಲೋಕಾ ದಾಳಿ
Share this Article
  • FB
  • TW
  • Linkdin
  • Email

ಸಾರಾಂಶ

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದಾರೆ. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಅಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

 ಮಂಗಳೂರು : ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಅವರ ಮನೆ ಮತ್ತು ಕಚೇರಿ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಂಕನಾಡಿ ಸಮೀಪದ ವೆಲೆನ್ಸಿಯಾದಲ್ಲಿರುವ ಕೃಷ್ಣವೇಣಿಯವರ ನಿವಾಸ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದ್ದು, ದಾಖಲೆಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದಾರೆ. 

ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಅಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಕೃಷ್ಣವೇಣಿ ಅವರು ವೆಲೆನ್ಸಿಯಾದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದು, ಅಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಮೂರು ವಾಹನಗಳಲ್ಲಿ ಆಗಮಿಸಿದ್ದರು. ಕೃಷ್ಣವೇಣಿ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ 50 ಸಾವಿರ ರು. ನಗದು, 30 ಗ್ರಾಂ ಚಿನ್ನ ಲಭಿಸಿದೆ ಎಂದು ಹೇಳಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.