ಸಾರಾಂಶ
ರಾಮನಗರ: ಪ್ರಾದೇಶಿಕ ಸಾರಿಗೆ ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಟ್ರ್ಯಾಕ್ಟರ್ ನೋಂದಣಿಯಲ್ಲಿ ನಡೆದಿರುವ ಭಾರೀ ಪ್ರಮಾಣದ ಅವ್ಯವಹಾರವನ್ನು ಬಯಲಿಗೆಳೆದಿದ್ದಾರೆ.
ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ತಂಡ, 1800ಕ್ಕೂ ಹೆಚ್ಚು ಟ್ರಾಕ್ಟರ್ ನೋಂದಣಿಯಲ್ಲಿ ಅವ್ಯವಹಾರ ನಡೆದಿರುವುದನ್ನು ಪತ್ತೆ ಹಚ್ಚಿದ್ದಾರೆ.ಮೂವರ ಬಂಧನ:
ಆರ್‌ಟಿಒ ಕಚೇರಿ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ರಾಮನಗರ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಕುಮಾರ್, ಈ ಹಿಂದೆ ಇಲ್ಲಿ ಕೆಲಸ ಮಾಡುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ರಚಿತ್ ಕುಮಾರ್, ಬ್ರೋಕರ್ ಸತೀಶ್ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.ಟ್ರ್ಯಾಕ್ಟರ್‌ಗಳಿಗೆ ಹೊಸ ದಾಖಲೆ ನೀಡಿದ್ದ ಅಧಿಕಾರಿಗಳು ಸರ್ಕಾರಕ್ಕೆ ಕೋಟ್ಯಂತರ ರು. ಹಣ ವಂಚನೆ ಮಾಡಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಮೂವರನ್ನು ವಿಚಾರಣೆಗೊಳಪಡಿಸಿ, ದಾಖಲೆಗಳನ್ನು ಪರಿಶೀಲಿಸಿದರು.
ತಡರಾತ್ರಿವರೆಗೆ ಆರ್‌ಟಿಒ ಕಚೇರಿಯಲ್ಲಿ ಪರಿಶೀಲನೆ ಮುಂದುವರೆದಿದ್ದು, ಮತ್ತಷ್ಟು ಹಗರಣ ಬೆಳಕಿಗೆ ಬರಲಿದೆ ಎಂದು ಹೇಳಲಾಗಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಕುಮಾರ್ ಶನಿವಾರ(ಜೂ.೨೯) ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದರು. ಇನ್ನು ದ್ವಿತೀಯ ದರ್ಜೆ ಸಹಾಯಕ ರಚಿತ್‌ಕುಮಾರ್ ಕೆಲ ದಿನಗಳ ಹಿಂದೆ ಚಿಕ್ಕಮಗಳೂರು ಆರ್‌ಟಿಓ ಕಚೇರಿಗೆ ವರ್ಗಾವಣೆಗೊಂಡಿದ್ದರು.ಬೆಂಗಳೂರಿನಲ್ಲೂ ದಾಳಿ:
ರಾಮನಗರ ಆರ್‌ಟಿಓ ಕಚೇರಿಗೆ ದಾಳಿ ಮಾಡುವ ಮುನ್ನಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಕುಮಾರ್ ಅವರ ಬೆಂಗಳೂರಿನ ಮನೆಯ ಮೇಲೂ ಲೋಕಾಯುಕ್ತ ಪೊಲೀಸರು ದಾಳಿಮಾಡಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಆನಂತರ ರಾಮನಗರ ಪ್ರಾದೇಶಿಕ ಸಾರಿಗೆ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇನ್ನು ಬ್ರೋಕರ್ ಸತೀಶ್ ಎಂಬುವರ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದಾಗ ಆರ್‌ಟಿಓ ಕಚೇರಿಯ ಕೆಲ ಕಡತಗಳು ಸಿಕ್ಕಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಕುಮಾರ್, ದ್ವಿತೀಯ ದರ್ಜೆ ಸಹಾಯಕ ರಚಿತ್ ಕುಮಾರ್ ಮತ್ತು ದಲ್ಲಾಳಿ ಸತೀಶ್ ಶಾಮೀಲಾಗಿ, ಸಾಕಷ್ಟು ಲಂಚಪಡೆದು ಹಳೆಯ ಟ್ರ್ಯಾಕ್ಟರ್‌ಗಳಿಗೂ ಹೊಸದು ಎಂದು ನೋಂದಣಿ ಮಾಡಿಕೊಡುತ್ತಿದ್ದರು. ಅದೂ ಅಲ್ಲದೆ ಟ್ರ್ಯಾಕ್ಟರ್‌ಗಳಿಗೆ ಬೋನೋಫೈಡ್ ಸರ್ಟಿಪಿಕೇಟ್ ಇಲ್ಲದಿದ್ದರೂ ನೋಂದಣಿ ಮಾಡಿಕೊಡುತ್ತಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಈ ದಾಳಿಯಲ್ಲಿ ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಸುಧೀರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.ಬಾಕ್ಸ್...........
ನಿವೃತ್ತಿಯ ದಿನವೇ ಶಿವಕುಮಾರ್‌ಗೆ ಲೋಕಾಯುಕ್ತರ ಶಾಕ್ರಾಮನಗರ: ರಾಮನಗರ ಪ್ರಾದೇಶಿಕ ಸಾರಿಗೆ ಅಧಿಕಾರಿ ಆಗಿರುವ ಶಿವಕುಮಾರ್ ಅವರದ್ದು ಜೂ.28ರಂದು ಶುಕ್ರವಾರ ಕೆಲಸದ ಕೊನೆ ದಿನ. ಅವರು ಇಂದು ನಿವೃತ್ತಿಯಾಗುವವರು ಇದ್ದರು. ಅವರಿಗೆ ಲೋಕಾಯುಕ್ತರು ಬಿಗ್ ಶಾಕ್ ಕೊಟ್ಟಿದ್ದಾರೆ.
ರಾಮನಗರ ಆರ್ ಟಿಒ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎನ್ನುವ ದೂರುಗಳ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇನ್ನೇನು ಕೊನೆ ದಿನ ಕೆಲಸ ಮುಗಿಸಿ ಮನೆಗೆ ಹೊರಡಬೇಕೆಂದಿದ್ದ ಶಿವಕುಮಾರ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು, ಶಿವಕುಮಾರ್, ಎಸ್ಡಿಎ ರಚಿತ್ ರಾಜ್ ಮತ್ತು ಬ್ರೋಕರ್ ಸತೀಶ್ ಅವರನ್ನು ಬಂಧಿಸಿದ್ದಾರೆ. ಸೀಜ್ ಮಾಡಿರುವ ವಾಹನಗಳ ದಾಖಲೆಯನ್ನು ನೀಡಿ ಹಳೇ ಟ್ರಾಕ್ಟರ್ಗಳಿಗೆ ಹೊಸ ದಾಖಲೆ ಸೃಷ್ಟಿ ಮಾಡಿದ್ದಾರೆ. 1800ಕ್ಕೂ ಹೆಚ್ಚುಟ್ರ್ಯಾಕ್ಟರ್ ಗಳಿಗೆ ಹೊಸ ದಾಖಲೆ ನೀಡಿರುವುದು ಬೆಳಕಿಗೆ ಬಂದಿದೆ.
28ಕೆಆರ್ ಎಂಎನ್ 9.ಜೆಪಿಜಿರಾಮನಗರ ಪ್ರಾದೇಶಿಕ ಸಾರಿಗೆ ಕಚೇರಿ.
-----------------------------