ಸಾರ್ವಜನಿಕರ ದೂರಿನ ಮೇರೆಗೆ ಗುರುವಾರ ಉಡುಪಿ ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಿವಿಧ ವಿಭಾಗಗಳ ಕಡತಗಳನ್ನು ಪರಿಶೀಲಿಸಿದರು.

ಉಡುಪಿ: ಸಾರ್ವಜನಿಕರ ದೂರಿನ ಮೇರೆಗೆ ಗುರುವಾರ ಉಡುಪಿ ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಿವಿಧ ವಿಭಾಗಗಳ ಕಡತಗಳನ್ನು ಪರಿಶೀಲಿಸಿದರು.ಉಡುಪಿ ಲೋಕಾಯುಕ್ತ ಇನ್ಸೆಕ್ಟರ್ ಮಂಜುನಾಥ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಗರಸಭೆಯ ಆಡಳಿತಾತ್ಮಕ ದಾಖಲೆಗಳು, ಬಾಕಿ ಉಳಿದಿರುವ ಅರ್ಜಿಗಳು ಹಾಗೂ ವಿವಿಧ ಕಡತಗಳ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲಿಸಿದ್ದಾರೆ.

ನಗರಸಭೆಯಲ್ಲಿ ಕೆಲವು ಕಡತಗಳನ್ನು ಅನಗತ್ಯವಾಗಿ ದೀರ್ಘಕಾಲದಿಂದ ವಿಲೇವಾರಿಯಾಗದೇ ಬಾಕಿ ಉಳಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂಬ ಸಾರ್ವಜನಿಕರ ಆರೋಪಗಳು ಕೇಳಿಬಂದಿದ್ದವು. ಈ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ.

ದಾಳಿಯ ವೇಳೆ ವಿವಿಧ ವಿಭಾಗಗಳ ಕಾರ್ಯವೈಖರಿ, ಕಡತಗಳ ನಿರ್ವಹಣೆ ಹಾಗೂ ಸಾರ್ವಜನಿಕ ಅರ್ಜಿಗಳ ವಿಲೇವಾರಿ ಸ್ಥಿತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.