ಆದಾಯಕ್ಕೆ ಹೋಲಿಸಿದರೆ ಅಕ್ರಮವಾಗಿ ಹೆಚ್ಚುವರಿ ಆಸ್ತಿ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಲಬುರಗಿಯಲ್ಲಿರುವ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ವರಿ ಅವರ ಎರಡು ಮನೆಗಳು ಹಾಗೂ ಕಚೇರಿಯ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿಆದಾಯಕ್ಕೆ ಹೋಲಿಸಿದರೆ ಅಕ್ರಮವಾಗಿ ಹೆಚ್ಚುವರಿ ಆಸ್ತಿ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಲಬುರಗಿಯಲ್ಲಿರುವ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ವರಿ ಅವರ ಎರಡು ಮನೆಗಳು ಹಾಗೂ ಕಚೇರಿಯ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಲಬುರಗಿಯ ಮಹಾಲಕ್ಷ್ಮಿ ಲೇಔಟ್ ಮತ್ತು ಖಾದ್ರಿ ಚೌಕ್‌ನಲ್ಲಿರುವ ನಿವಾಸಗಳ ಮೇಲೆ ಲೋಕಾಯುಕ್ತ ಅಧಕಾರಿಗಳ ತಂಡ ಈ ದಾಳಿ ನಡೆಸಿದೆ.ಅಧಿಕಾರಿ ರಾಜೇಶ್ವರಿ ಅವರು ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಲೋಕಾಯುಕ್ತ ತಂಡ ಸ್ಥಳದಲ್ಲೇ ಕಾದು ನಿಂತಿತ್ತು. ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಅವರ ಮುಖ್ಯ ನಿವಾಸ, ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ಮನೆ ಹಾಗೂ ಅವರ ಜೆಸ್ಕಾಂ ಕಚೇರಿ ಸಹಿತ ಒಟ್ಟು ಮೂರು ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.ಜೆಸ್ಕಾಂ ಎಇಇ ರಾಜೇಶ್ವರಿ ಅವರಿದ್ದ ಕಲಬುರಗಿ ನಗರದ ಮಹಾಲಕ್ಷ್ಮಿಲೇಔಟ್‌ನಲ್ಲಿರುವ ಮನೆ ಹಾಗೂ ಕಚೇರಿ ಮೇಲಿನ ದಾಳಿಯಲ್ಲಿ ಇದುವರೆಗೂ ನಡೆದ ಪರಿಶೀಲನೆಯಲ್ಲಿ 400ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ಗೊತ್ತಾಗಿದೆ. ಎಇಇ ರಾಜೇಶ್ವರಿ ಅವರು ಬೆಳಗ್ಗೆ ವಾಕಿಂಗ್ ಹೋಗಿದ್ದರು. ಅವರು ಮನೆಗೆ ಮರಳುವಷ್ಟರಲ್ಲೇ ಲೋಕಾಯುಕ್ತ ಅಧಿಕಾರಿಗಳ ತಂಡ ರಾಜೇಶ್ವರಿ ಅವರ ಬರುವಿಕೆಗೆ ಕಾಯುತ್ತ ಮನೆ ಮಂದೆ ನಿಂತಿತ್ತು. ಎಇಇ ಮನೆಗೆ ಬರುವುದರೊಳಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಎಇಇ ಮೇಲಿದೆ.