ನಗರದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ ಅವರ ನಿವಾಸ ಹಾಗೂ ಫಾರ್ಮ್ ಹೌಸ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೀದರ್
ನಗರದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ ಅವರ ನಿವಾಸ ಹಾಗೂ ಫಾರ್ಮ್ ಹೌಸ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ಕಳೆದ ತಿಂಗಳಷ್ಟೇ ಸೇವಾ ನಿವೃತ್ತಿ ಹೊಂದಿದ್ದ ಮಾಣಿಕರಾವ್ ಶೇರಿಕಾರ ಅವರು ಸೇವೆಯಲ್ಲಿದ್ದಾಗ ಅಕ್ರಮ ಆಸ್ತಿ ಗಳಿಸಿದ್ದಾರೆಂಬ ದೂರಿನ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಅವರ ಮಾರ್ಗದರ್ಶನದಲ್ಲಿ ಹಾಗೂ ಬೀದರ್‌ನ ಡಿವೈಎಸ್‌ಪಿ ಹನುಮಂತರಾಯ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಬೀದರ್ ನಗರದ ಹಕ್ಕ್ ಕಾಲೋನಿಯಲ್ಲಿರುವ ಶೇರಿಕಾರ ಅವರ ಮುಖ್ಯ ನಿವಾಸ, ಹುಮನಾಬಾದ್‌ನ ಟೀಚರ್ ಕಾಲೋನಿಯಲ್ಲಿರುವ ಮನೆ ಹಾಗೂ ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮ ದಲ್ಲಿರುವ ಫಾರ್ಮ್ ಹೌಸ್ ಸೇರಿದಂತೆ ಒಟ್ಟು ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ಸಾಗಿದೆ.ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಹಾಗೂ ಅಧಿಕಾರಿಗಳು ಶೇರಿಕಾರ ಅವರಿಗೆ ಸೇರಿದ ಆಸ್ತಿಪಾಸ್ತಿ, ಬ್ಯಾಂಕ್ ಖಾತೆ ಹಾಗೂ ಹೂಡಿಕೆಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಜಾಲಾಡುತ್ತಿದ್ದಾರೆ. ಪರಿಶೀಲನೆ ಪ್ರಗತಿ ಯಲ್ಲಿದ್ದು, ದಾಳಿಯ ವೇಳೆ ಪತ್ತೆಯಾದ ಅಕ್ರಮ ಆಸ್ತಿಯ ಸಂಪೂರ್ಣ ಮಾಹಿತಿ ಹಾಗೂ ಕಾಗದ ಪತ್ರಗಳ ಶೋಧನೆಯ ನಂತರ ಹೆಚ್ಚಿನ ವಿವರಗಳು ಹೊರಬರಬೇಕಿದೆ.