ಜಿಲ್ಲಾಸ್ಪತ್ರೆ ಮೇಲೆ ಲೋಕಾಯುಕ್ತರ ದಿಢೀರ್ ದಾಳಿ

| Published : Jul 24 2025, 01:45 AM IST

ಸಾರಾಂಶ

ರಾಮನಗರ: ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸಿದರು.

ರಾಮನಗರ: ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸಿದರು. 2021-22ನೇ ಸಾಲಿನಲ್ಲಿ ಜಿಲ್ಲಾಸ್ಪತ್ರೆಗೆ ಔಷಧಿಗಳ ಪೂರೈಕೆಯಲ್ಲಿ ಅವ್ಯವಹಾರ ನಡೆದಿರುವ ಕುರಿತು ಅನಾಮಧೇಯ ವ್ಯಕ್ತಿಯೊಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆಯ ಮೇಲೆ ದಾಳಿ ನಡೆಸಿ ಆಸ್ಪತ್ರೆಯಲ್ಲಿನ ಕಡತಗಳನ್ನು ಪರಿಶೀಲಿಸಿದರು. ಲೋಕಾಯುಕ್ತ ಎಸ್ಪಿ ಸ್ನೇಹಾ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಅಧಿಕಾರಿಗಳು ಜಿಲ್ಲಾಸ್ಪತ್ರೆಯಲ್ಲಿನ ಲೆಕ್ಕಪತ್ರಗಳನ್ನು ಪರಿಶೀಲನೆ ಮಾಡಿದರು. ಅಲ್ಲದೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮಂಜುನಾಥ್ ಅವರಿಂದಲೂ ಮಾಹಿತಿ ಸಂಗ್ರಹಿಸಿದರು.

23ಕೆಆರ್ ಎಂಎನ್ 8.ಜೆಪಿಜಿ

ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸಿದರು.