ಸಾರಾಂಶ
ಚನ್ನಗಿರಿ ಪಟ್ಟಣಕ್ಕೆ ದಾವಣಗೆರೆ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪುರೆ ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿದರು.
ಕನ್ನಡಪ್ರಭ ವಾರ್ತೆ ಚನ್ನಗಿರಿ
ಪಟ್ಟಣಕ್ಕೆ ದಾವಣಗೆರೆ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪುರೆ ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿದರು.ಸಾರ್ವಜನಿಕರು ಕಂದಾಯ ಇಲಾಖೆ, ಭೂಮಾಪನ ಇಲಾಖೆ, ಪುರಸಭೆ ಮತ್ತು ಸರ್ಕಾರಿ ಆಸ್ಪತ್ರೆಗಳು, ಇನ್ನಿತರೆ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಗಳ ಬಗ್ಗೆ ದೂರುದಾರರಿಂದ ಅರ್ಜಿಗಳನ್ನು ಪಡೆದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಸಿ, ಕಾನೂನುಬದ್ಧ, ನ್ಯಾಯ ಸಮ್ಮತವಾಗಿ ಸಾರ್ವಜನಿಕರಿಗೆ ಆಗಬಹುದಾದ ಕೆಲಸಗಳನ್ನು 15 ದಿನಗಳಲ್ಲಿ ಮಾಡಿಕೊಡಿ. ಇಲ್ಲವಾದರೆ ಸೂಕ್ತ ರೀತಿಯಲ್ಲಿ ಕಾನೂನು ಕ್ರಮಗಳನ್ನು ಜರುಗಿಸುವಂತೆ ಮಾಡಿಕೊಳ್ಳುವುದು ಬೇಡ ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಅಧೀಕ್ಷಕರು ಸೂಚನೆ ನೀಡಿದರು.
ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಫತ್ರೆಯಲ್ಲಿ ಮತ್ತು ಪಿ.ಎಚ್.ಸಿ.ಗಳಲ್ಲಿ ವೈದ್ಯರಿಲ್ಲದೇ, ಸ್ವಚ್ಚತೆ ನಿರ್ವಹಣೆ ಇಲ್ಲದೇ ಅವ್ಯವಸ್ಥೆ ಆಗರವಾಗಿದೆ. ಈ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ದೂರು ನೀಡಿದ್ದಾರೆ. ಈ ಬಗ್ಗೆ ಗಮನ ಹರಿಸಬೇಕೆಂದು ತಾಲೂಕು ವೈದ್ಯಾಧಿಕಾರಿ ಡಾ.ಶಿವಕುಮಾರ್ ಅವರಿಗೆ ಸೂಚನೆ ನೀಡಿದರು.ಪುರಸಭೆಯ ಕೆಲವು ವಾರ್ಡ್‌ಗಳಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲಿಸಿತು. ಸಾರ್ವಜನಿಕರು ಓಡಾಡುವ ರಸ್ತೆಗಳು ಮುಕ್ತವಾಗಿರಬೇಕು. ಈ ಎಲ್ಲ ಕೆಲಸಗಳು ಆಗದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರದ ಲೋಕಾಯುಕ್ತ ಆಧಿಕಾರಿಗಳ ತಂಡವು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಘನತ್ಯಾಜ್ಯ ವಿಲೇವಾರಿ ಘಟಕ, ಸಂತೆ ಮಾರುಕಟ್ಟೆ, ಗಣಪತಿ ಹೊಂಡ, ಕೆರೆ ಈ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.- - - -17ಕೆಸಿಎನ್‌ಜಿ3:
ಚನ್ನಗಿರಿಯಲ್ಲಿ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪುರೆ ಅವರು ಸಾರ್ವಜನಿಕರಿಂದ ಅಹವಾಲುಗಳ ಅರ್ಜಿಗಳನ್ನು ಸ್ವೀಕರಿಸಿದರು. ಇಲಾಖೆ ಸಿಬ್ಬಂದಿ ಇದ್ದರು.