ಮುಧೋಳ ತಾಲೂಕಾಸ್ಪತ್ರೆಗೆ ಲೋಕಾಯುಕ್ತರ ಭೇಟಿ

| Published : Aug 11 2025, 02:17 AM IST

ಮುಧೋಳ ತಾಲೂಕಾಸ್ಪತ್ರೆಗೆ ಲೋಕಾಯುಕ್ತರ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಧೋಳ ನಗರದ ತಾಲೂಕು ಆಸ್ಪತ್ರೆಗೆ ಲೋಕಾಯುಕ್ತ ಬಾಗಲಕೋಟೆ ಜಿಲ್ಲೆಯ ಡಿವೈಎಸ್ಪಿ ಸುರೇಶ ರೆಡ್ಡಿ ಅವರು ಶನಿವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಒಪಿಡಿ, ಬಾಣಂತಿಯರ ವಾರ್ಡ್, ಜನರಲ್ ವಾರ್ಡ್, ಶಸ್ತ್ರಚಿಕಿತ್ಸಾ ವಿಭಾಗ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ನೊಂದಣಿ ಕೇಂದ್ರಕ್ಕೆ ಮತ್ತು ಫಾರ್ಮಸಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು.

ಕನ್ನಡಪ್ರಭ ವಾರ್ತೆ ಮುಧೋಳ

ನಗರದ ತಾಲೂಕು ಆಸ್ಪತ್ರೆಗೆ ಲೋಕಾಯುಕ್ತ ಬಾಗಲಕೋಟೆ ಜಿಲ್ಲೆಯ ಡಿವೈಎಸ್ಪಿ ಸುರೇಶ ರೆಡ್ಡಿ ಅವರು ಶನಿವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಒಪಿಡಿ, ಬಾಣಂತಿಯರ ವಾರ್ಡ್, ಜನರಲ್ ವಾರ್ಡ್, ಶಸ್ತ್ರಚಿಕಿತ್ಸಾ ವಿಭಾಗ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ನೊಂದಣಿ ಕೇಂದ್ರಕ್ಕೆ ಮತ್ತು ಫಾರ್ಮಸಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು.

ಕೆಲ ರೋಗಿಗಳನ್ನು ಪ್ರತ್ಯೇಕವಾಗಿ ಮಾತನಾಡಿಸಿ ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಕುರಿತು, ವೈದ್ಯರು ಹಾಗೂ ಸಿಬ್ಬಂದಿ ರೋಗಿಗಳೊಂದಿಗೆ ನಡೆದುಕೊಳ್ಳುವ ವರ್ತನೆ ಕುರಿತು ಮಾಹಿತಿ ಪಡೆದರು. ಇದೇ ವೇಳೆ ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳಬೇಕೆಂದು ವೈದ್ಯರಿಗೆ ಸೂಚನೆ ನೀಡಿದರು.

ಆಸ್ಪತ್ರೆಯಲ್ಲಿ ಸಿಗುವ ಎಲ್ಲ ಸೌಲಭ್ಯಗಳ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಹಾಗೂ ಮುಖ್ಯ ವೈದ್ಯಾಧಿಕಾರಿಗಳಿಂದ ಲೋಕಾಯುಕ್ತರು ಮಾಹಿತಿ ಪಡೆದುಕೊಂಡರು. ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ, ಮುಖ್ಯ ವೈದ್ಯಾಧಿಕಾರಿ ಬಸವರಾಜ ಪಾಟೀಲ ಸೇರಿದಂತೆ ಆಸ್ಪತ್ರೆಯ ಇತರೆ ವೈದ್ಯರು ಮತ್ತು ಸಿಬ್ಬಂದಿ ಇದ್ದರು.