ಸಾರಾಂಶ
ಮಾಗಡಿ: ತಾಲೂಕಿನ ವೀರೇಗೌಡನ ದೊಡ್ಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಂಚನಬೆಲೆ ಲೋಕೇಶ್, ಉಪಾಧ್ಯಕ್ಷರಾಗಿ ಜಯರಾಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಾಗಡಿ: ತಾಲೂಕಿನ ವೀರೇಗೌಡನ ದೊಡ್ಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಂಚನಬೆಲೆ ಲೋಕೇಶ್, ಉಪಾಧ್ಯಕ್ಷರಾಗಿ ಜಯರಾಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಮುಂದಿನ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷ ಲೋಕೇಶ್ ಮಾತನಾಡಿ, ಶಾಸಕ ಎಚ್.ಸಿ.ಬಾಲಕೃಷ್ಣ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ಹಾಗೂ ಸಂಘದ ನಿರ್ದೇಶಕರ ಸಹಕಾರದಿಂದ ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಸಹಕಾರ ಸಂಘ ಲಾಭದಾಯಕವಾಗಿ ನಡೆಯುತ್ತಿದ್ದು ಹೊಸ ಕಟ್ಟಡ ನಿರ್ಮಾಣ ಮಾಡಬೇಕಾಗಿರುವುದರಿಂದ ಎಲ್ಲರ ಸಹಕಾರ ಪಡೆದು ಸಂಘವನ್ನು ಮಾದರಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಸಂಭ್ರಮಾಚರಣೆ ಇಲ್ಲ: ಕಾಂಗ್ರೆಸ್ ಬೆಂಬಲಿತ ವೀರೇಗೌಡನದೊಡ್ಡಿ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆಯಾದರೂ ಯಾರೊಬ್ಬರೂ ಸಂಭ್ರಮಾಚರಣೆ ಮಾಡಲಿಲ್ಲ. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಜೆ.ಪಿ.ಚಂದ್ರೇಗೌಡ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರೂ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದೆ ತೆರಳಿದರು.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಕೃಷ್ಣಪ್ಪ, ಗಂಗಮ್ಮ, ನರಸಿಂಹಮೂರ್ತಿ, ಪುಟ್ಟತಾಯಮ್ಮ, ತ್ಯಾಗದರೆಪಾಳ್ಯ ನರಸಿಂಹಮೂರ್ತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಇತರರು ಭಾಗವಹಿಸಿದ್ದರು.