ಸಾರಾಂಶ
ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಕೆರೆ, ಸ್ಮಶಾನ ಒತ್ತುವರಿಯಾಗಿ ಹಲವು ವರ್ಷಗಳೇ ಕಳೆದಿವೆ. ಗ್ರಾಮಸ್ಥರು ಅನೇಕ ಬಾರಿ ಹೋರಾಟ ಮಾಡಿದರು ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿಲ್ಲ
ಕಲಘಟಗಿ:
ತಾಲೂಕಿನ ಸುಳಿಕಟ್ಟಿ ಗ್ರಾಮಸ್ಥರು ಬರುವ ಲೋಕಸಭಾ ಚುನಾವಣೆಯನ್ನು ಸಾಮೂಹಿಕವಾಗಿ ಬಹಿಷ್ಕರಿಸುವುದಾಗಿ ಶುಕ್ರವಾರ ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಕೆರೆ, ಸ್ಮಶಾನ ಒತ್ತುವರಿಯಾಗಿ ಹಲವು ವರ್ಷಗಳೇ ಕಳೆದಿವೆ. ಗ್ರಾಮಸ್ಥರು ಅನೇಕ ಬಾರಿ ಹೋರಾಟ ಮಾಡಿದರು ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿಲ್ಲ. ನಮ್ಮ ನ್ಯಾಯಯುತ ಬೇಡಿಕೆ ಈಡೇರಿಸಲು ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.ಲೋಕಸಭಾ ಚುನಾವಣೆ ಪೂರ್ವದಲ್ಲಿ ನಮ್ಮ ಬೇಡಿಕೆ ಈಡೇರಿಸದೆ ಹೋದಲ್ಲಿ ಚುನಾವಣೆಯಿಂದ ದೂರ ಉಳಿಯುವುದಾಗಿ ಎಚ್ಚರಿಸಿದರು. ಈಗಾಗಲೇ ಈ ಸಂಬಂಧ ಮುಖ್ಯಮಂತ್ರಿ, ಕೇಂದ್ರ ಸಚಿವರು, ಶಾಸಕರಿಗೆ, ಜಿಲ್ಲಾಧಿಕಾರಿ, ತಹಸೀಲ್ದಾರ್ ಅವರಿಗೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.ಈ ವೇಳೆ ಮಾಂತೇಶ ಮಿರಾಸಿ, ಮಾದೇವಿ ನಾಳಕರ್, ಮಲ್ಲೇಶ ನಾರ್ವೇಕರ್, ನಾಗೇಂದ್ರ ನೆಸ್ರೆಕರ, ಇಮಾಮ್ ಸಾಬ್ ನಾಯ್ಕರ, ಪರಶುರಾಮ ಎತ್ತಿನಗುಡ್ಡ, ಶಿವಾಜಿ ನಾಯ್ಕರ, ಶಿವಯ್ಯ ಹಿರೇಮಠ, ಬಾಳೇಶ ಹೊನ್ನಾಳ್ಕರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.