6 ತಿಂಗಳಲ್ಲಿ ಲೋಳಸೂರ ಸೇತುವೆ ಕಾಮಗಾರಿ ಆರಂಭ: ಸಚಿವ ಸತೀಶ ಜಾರಕಿಹೊಳಿ

| Published : Oct 01 2024, 01:34 AM IST

6 ತಿಂಗಳಲ್ಲಿ ಲೋಳಸೂರ ಸೇತುವೆ ಕಾಮಗಾರಿ ಆರಂಭ: ಸಚಿವ ಸತೀಶ ಜಾರಕಿಹೊಳಿ
Share this Article
  • FB
  • TW
  • Linkdin
  • Email

ಸಾರಾಂಶ

ಅತಿವೃಷ್ಟಿಯಿಂದ ಘಟಪ್ರಭೆ ನದಿ ನೀರಿನಲ್ಲಿ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯ ಸ್ಥಿತಿಗತಿ ಪರಿಶೀಲಿಸಿ, ಹೊಸ ಸೇತುವೆ ನಿರ್ಮಾಣ ಕುರಿತು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ಸಚಿವ ಸತೀಶ ಜಾರಕಿಹೊಳಿ ಚರ್ಚೆ ನಡೆಸಿದರು.

ಕನ್ನಡಪ್ರಭಾ ವಾರ್ತೆ ಗೋಕಾಕ

ಇತ್ತೀಚೆಗೆ ಅತಿವೃಷ್ಟಿಯಿಂದ ಘಟಪ್ರಭೆ ನದಿ ನೀರಿನಲ್ಲಿ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯ ಸ್ಥಿತಿಗತಿ ಪರಿಶೀಲಿಸಿ, ಹೊಸ ಸೇತುವೆ ನಿರ್ಮಾಣ ಕುರಿತು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ಸಚಿವ ಸತೀಶ ಜಾರಕಿಹೊಳಿ ಚರ್ಚೆ ನಡೆಸಿದರು.

ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶ ಅಭಿವೃದ್ಧಿಗೆ ಸಚಿವರು ನಿರ್ಧರಿಸಿದ್ದು, ಲೋಳಸೂರ ಸೇತುವೆ ಪ್ರವಾಹ ಬಂದಾಗಲೊಮ್ಮೆ ಮುಳುಗಡೆ ಆಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೂ ಪದೇ ಪದೆ ತೊಂದರೆ ಉಂಟಾಗುತ್ತಿರುವುದರಿಂದ ಹೊಸ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.

ನೂತನ ಸೇತುವೆಯ ನೀಲನಕ್ಷೆ ವೀಕ್ಷಿಸಿ, ಅಧಿಕಾರಿಗಳಿಗೆ ಕೆಲವು ಸಲಹೆ, ಸೂಚನೆ ನೀಡಿ ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆ ಆಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಸೇತುವೆ ನಿರ್ಮಿಸುವ ಅಗತ್ಯವಿದೆ. ಸರ್ಕಾದಿಂದ ಈಗಾಗಲೇ ₹40 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ಆರು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ಲೋಕೋಪಯೋಗಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.