2,793 ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ನಾಡಿಗೆ ಸಮರ್ಥ ಆಡಳಿತ ಕೊಡುವ ಮೂಲಕ ಸಿದ್ದರಾಮಯ್ಯ ಅವರು ಕೀರ್ತಿ ಶೇಷರಾದ ಡಿ.ದೇವರಾಜ ಅರಸುರೊಂದಿಗೆ ಕರ್ನಾಟಕದ ಸಾಮಾಜಿಕ ನ್ಯಾಯದ ಸುವರ್ಣ ಯುಗ ಕಲ್ಪಿಸಿದ್ದಾರೆ. ಜನಾನುರಾಗಿ ದಾಖಲೆ ಸರದಾರ ಹಾಗೂ ರಾಜಕೀಯ ಭೀಷ್ಮರು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಮದ್ದೂರು:

ಅಹಿಂದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ಸಂಜೆ ವಿಜಯೋತ್ಸವ ಆಚರಿಸಿದರು.

ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಲ್ಲಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಅಶ್ವಿನ್ ರಾಮಕೃಷ್ಣ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿ ಧನ್ಯತಾ ಭಾವ ಮೆರೆದು ಪುಷ್ಪಾರ್ಚನೆಯೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಈ ವೇಳೆ ಮಾತನಾಡಿದ ಅಶ್ವಿನ್ ರಾಮಕೃಷ್ಣ ಮತ್ತು ಅಹಿಂದ ಮುಖಂಡರು, 2,793 ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ನಾಡಿಗೆ ಸಮರ್ಥ ಆಡಳಿತ ಕೊಡುವ ಮೂಲಕ ಸಿದ್ದರಾಮಯ್ಯ ಅವರು ಕೀರ್ತಿ ಶೇಷರಾದ ಡಿ.ದೇವರಾಜ ಅರಸುರೊಂದಿಗೆ ಕರ್ನಾಟಕದ ಸಾಮಾಜಿಕ ನ್ಯಾಯದ ಸುವರ್ಣ ಯುಗ ಕಲ್ಪಿಸಿದ್ದಾರೆ. ಜನಾನುರಾಗಿ ದಾಖಲೆ ಸರದಾರ ಹಾಗೂ ರಾಜಕೀಯ ಭೀಷ್ಮರು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ವಿಜಯೋತ್ಸವದಲ್ಲಿ ಕುರುಬರ ಸಂಘದ ಗೌರವಾಧ್ಯಕ್ಷ ಎಂ.ಮರಿಹೆಗಡೆ, ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ.ನಾಗರಾಜು, ಅಹಿಂದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಮಹದೇವಯ್ಯ, ಮುಖಂಡರಾದ ರಾಜೇಂದ್ರ, ಮಲವರಾಜು, ಜವರಪ್ಪ, ಮನು, ಚಿಕ್ಕಮ್ಮ, ರಾಜೇಶ, ಚೆನ್ನೇಶ್, ಮರಿಗೌಡ, ಶಶಿಕುಮಾರ್, ಶಿವಕುಮಾರ್, ಪ್ರಮೀಳಾ, ಮಲ್ಲೇಶ್, ಶಿವು ಬಿಲವಯ್ಯ, ಕಿರಣ್, ಕುಮಾರ ಹೆಗ್ಗಡೆ ಮತ್ತಿತರರು ಭಾಗವಹಿಸಿದ್ದರು.ಆಡಳಿತದಲ್ಲಿ ಅರಸು ದಾಖಲೆ ಮುರಿದ ಸಿದ್ದರಾಮಯ್ಯ; ಜ.10ರಂದು ಸಂಭ್ರಮಾಚರಣೆ: ನಾಗೇಂದ್ರಕುಮಾರ್

ಕೆ.ಆರ್.ಪೇಟೆ:

ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಆಡಳಿತ ಅವಧಿ ದಾಖಲೆ ಮುರಿದು ರಾಜ್ಯದಲ್ಲೇ ಹೆಚ್ಚು ಅವಧಿ ಸಿಎಂ ಆಗಿ ಆಳ್ವಿಕೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಶುಭವಾಗಲೆಂದು ಹಾರೈಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಜ.10ರಂದು ಸಂಭ್ರಮಾಚರಣೆ ಮಾಡಲಾಗುವುದು ಎಂದು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಐಪನಹಳ್ಳಿ ಡಿ.ನಾಗೇಂದ್ರಕುಮಾರ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.10ರ ಶನಿವಾರ ಬೆಳಗ್ಗೆ ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಸಿಎಂ ಸಿದ್ದರಾಮಯ್ಯನ ಹೆಸರಿನಲ್ಲಿ ವಿಶೇಷ ಪೂಜೆ, ನಂತರ ಪ್ರವಾಸಿ ಮಂದಿರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ, ಬಳಿಕ ಸಾದ್ಗೋನಹಳ್ಳಿ ಬಳಿ ಇರುವ ಮಾತೃಭೂಮಿ ವೃದ್ಧಾಶ್ರಮದಲ್ಲಿ ವೃದ್ಧರಿಗೆ ಅನ್ನಸಂತರ್ಪಣೆ ಮಾಡಲಾಗುವುದು ಎಂದರು.

ಸುದ್ಧಿಗೋಷ್ಠಿಯಲ್ಲಿ ರಾಜ್ಯ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಮಿತಿ ಮಾಜಿ ಅಧ್ಯಕ್ಷ ಎಂ.ಡಿ. ಕೃಷ್ಣಮೂರ್ತಿ, ಪುರಸಭೆ ಮಾಜಿ ಸದಸ್ಯ ಡಿ.ಪ್ರೇಮಕುಮಾರ್, ತಾಪಂ ಮಾಜಿ ಸದಸ್ಯ ಮೂಡನಹಳ್ಳಿ ನಾಗೇಂದ್ರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಿಪುರದ ಎಲ್.ಪಿ.ನಂಜಪ್ಪ, ನಿವೃತ್ತ ಪ್ರಾಂಶುಪಾಲ ರಾಜಯ್ಯ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎ.ಬಿ.ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಎನ್.ದಿವಾಕರ್ ಸೇರಿದಂತೆ ಹಲವರಿದ್ದರು.