ಜನಪರ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

| Published : Apr 02 2024, 01:02 AM IST

ಜನಪರ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ
Share this Article
  • FB
  • TW
  • Linkdin
  • Email

ಸಾರಾಂಶ

ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸಿ, ಹೋರಾಡಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಜನಪರ ಕೆಲಸ ನೋಡಿ ಮತ ನೀಡಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಮನವಿ ಮಾಡಿದರು.

ಪಟ್ಟಣದ ಶ್ರೀ ಆದಿಚುಂಚನಗಿರಿ ಸಭಾ ಭವನದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸಿ, ಹೋರಾಡಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಜನಪರ ಕೆಲಸ ನೋಡಿ ಮತ ನೀಡಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಮನವಿ ಮಾಡಿದರು.

ಪಟ್ಟಣದ ಶ್ರೀ ಆದಿಚುಂಚನಗಿರಿ ಸಭಾ ಭವನದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಈ ಭಾಗದಲ್ಲಿ 10 ವರ್ಷಗಳ ಹಿಂದೆ ಅಡಕೆ ಹಳದಿ ಎಲೆ ರೋಗ ವಿಪರೀತವಾಗಿದ್ದು, ರೈತರು ಸಂಕಷ್ಟದಲ್ಲಿದ್ದರು. ರೈತಪರವಾಗಿ ಹೋರಾಡಿ ಗೋರಖ್‌ ಸಿಂಗ್‌ ವರದಿ ಅನುಷ್ಠಾನಕ್ಕೆ ತರುವ ಕೆಲಸ ಮಾಡಿದೆವು. ಆದರೆ 10 ವರ್ಷ ಕಳೆದರೂ ಅದರಿಂದ ಏನು ಪ್ರಯೋಜನಾಗಿಲ್ಲ. ಸಂಸದರಾಗಿದ್ದವರು ಯಾವುದೇ ಕೆಲಸ ಮಾಡಲಿಲ್ಲ.

ರೈತರ ಸಮಸ್ಯೆಗಳು ಹಾಗೇಯೆ ಉಳಿದಿದೆ. ಹಳದಿ ಎಲೆ ರೋಗ, ಇತ್ತೀಚಿನ ವರ್ಷಗಳಲ್ಲಿ ಎಲೆ ಚುಕ್ಕಿ ರೋಗ ಹೀಗೆ ಹತ್ತು ಹಲವು ಸಮಸ್ಯೆಗಳಿಂದ ರೈತರು ಸಂಕಷ್ಟದಲ್ಲಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳು ಜನರನ್ನು ಕಾಡುತ್ತಿದೆ. ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅದರ ಪರಿಹಾರಕ್ಕಾಗಿ ಹೋರಾಡುವುದು ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ನನಗೆ ಮತ ನೀಡಿ ಗೆಲ್ಲಿಸಿ ಎಂದು ಮನವಿ ಮಾಡಿದರು.

ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ಅನುದಾನ ಬರುತ್ತಿಲ್ಲ. ಕೇಂದ್ರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಜನ ತತ್ತರಿಸಿದ್ದಾರೆ. ಬೆಲೆ ಏರಿಕೆ, ಸುಳ್ಳು ಭರವಸೆಗಳು, ಭ್ರಷ್ಠಾಚಾರ ಕೇಂದ್ರದ ಸಾಧನೆಗಳಾಗಿವೆ. ಜಯಪ್ರಕಾಶ್‌ ಹೆಗ್ಡೆಯವರನ್ನು ಈ ಕ್ಷೇತ್ರದಿಂದ ಗೆಲ್ಲಿಸಬೇಕು ಎಂದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಪಿ.ಅಂಶುಮಂತ್‌, ಸುದೀರ್‌ ಕುಮಾರ್‌ ಮರೋಳಿ, ಎಚ್‌.ಎಂ.ಸತೀಶ್‌, ಆಯನೂರು ಮಂಜುನಾಥ್‌, ಸಚಿನ್‌ ಮೀಗಾ, ಸ್ಥಳೀಯ ಮುಖಂಡರು ಇದ್ದರು.