ಸಾರಾಂಶ
ಪ್ರತಿಯೊಬ್ಬರೂ ಭಗವದ್ಗೀತೆಯನ್ನು ಅಧ್ಯಯನ ಮಾಡಿದಲ್ಲಿ ಶ್ರೀಕೃಷ್ಣನ ಮಹತ್ವದ ಬಗ್ಗೆ ಅರಿವಾಗುತ್ತದೆ.
ಕಾರವಾರ: ಪ್ರತಿಯೊಬ್ಬರೂ ಭಗವದ್ಗೀತೆಯನ್ನು ಅಧ್ಯಯನ ಮಾಡಿದಲ್ಲಿ ಶ್ರೀಕೃಷ್ಣನ ಮಹತ್ವದ ಬಗ್ಗೆ ಅರಿವಾಗುತ್ತದೆ. ಆ ದಿಸೆಯಲ್ಲಿ ಶ್ರೀಕೃಷ್ಣನ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲ ಹೇಳಿದರು.ಅವರು ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶಿವಾಜಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಶ್ರೀಕೃಷ್ಣ ಜಯಂತಿಯನ್ನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶ್ರೀಕೃಷ್ಣನು ಭಗವದ್ಗೀತೆಯಲ್ಲಿ ತಿಳಿಸಿರುವ ಸಂದೇಶಗಳು ಎಲ್ಲ ಕಾಲಕ್ಕೂ ಅನ್ವಯವಾಗಲಿವೆ. ಎಲ್ಲ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಒದಗಿಸಲಿವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ನೀಡಿದ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ ಎಂದರು.ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ ಇದ್ದರು.