ಕನ್ನಡಪ್ರಭ ವಾರ್ತೆ ಬೆಳಗಾವಿಕಬ್ಬು ಬೆಳೆಗಾರರ ಹೋರಾಟದಿಂದಾಗಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಪುನಾರಂಭಗೊಂಡ ಬೆನ್ನಲ್ಲೇ ಭೀಕರ ಅಪಘಾತ ಸಂಭವಿಸಿದೆ. ನಿಪ್ಪಾಣಿ ಸಮೀಪದ ಸ್ತವನಿಧಿ ಘಾಟ್‌ನ ವೇಗತಡೆ ಬಳಿ ಬೈಕ್‌ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದು, ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ಹಾಗೂ ಅವರ ಪುತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಪ್ಪಾಣಿ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಪುಂಡಲೀಕ ಹಟ್ಟಿ (50) ಮತ್ತು ಅವರ ಪುತ್ರಿ ನಿಖಿತಾ (24) ಮೃತಪಟ್ಟವರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕಬ್ಬು ಬೆಳೆಗಾರರ ಹೋರಾಟದಿಂದಾಗಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಪುನಾರಂಭಗೊಂಡ ಬೆನ್ನಲ್ಲೇ ಭೀಕರ ಅಪಘಾತ ಸಂಭವಿಸಿದೆ. ನಿಪ್ಪಾಣಿ ಸಮೀಪದ ಸ್ತವನಿಧಿ ಘಾಟ್‌ನ ವೇಗತಡೆ ಬಳಿ ಬೈಕ್‌ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದು, ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ಹಾಗೂ ಅವರ ಪುತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಪ್ಪಾಣಿ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಪುಂಡಲೀಕ ಹಟ್ಟಿ (50) ಮತ್ತು ಅವರ ಪುತ್ರಿ ನಿಖಿತಾ (24) ಮೃತಪಟ್ಟವರು.

ಪುಂಡಲೀಕ ಹಟ್ಟಿ ಅವರು ಮಗಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಸ್ತವನಿಧಿ ಘಾಟ್‌ನ ವೇಗತಡೆ ಬಳಿ ವೇಗ ಕಡಿಮೆ ಮಾಡಿ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಂದೆ-ಮಗಳು ರಸ್ತೆಗೆ ಬಿದ್ದಿದ್ದು, ಅವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಬ್ಬು ಬೆಳೆಗಾರರ ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೋರಾಟದ ಹಿನ್ನೆಲೆಯಲ್ಲಿ ಉಂಟಾಗಿದ್ದ ಸಂಚಾರ ಅಡಚಣೆ ನಿವಾರಣೆಯಾಗಿ ವಾಹನಗಳ ಸಂಚಾರ ಆರಂಭವಾದ ಬೆನ್ನಲ್ಲೇ ಈ ದುರಂತ ಸಂಭವಿಸಿರುವುದು ದುರದೃಷ್ಟಕರ. ತಂದೆ-ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸ್ ಇಲಾಖೆಯಲ್ಲಿ ಶೋಕದ ಛಾಯೆ ಆವರಿಸಿದೆ.

ಈ ಕುರಿತು ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.