ಸಾರಾಂಶ
ಮಾಗಡಿ: ತಾಲೂಕಿನ ತಿಪ್ಪಸಂದ್ರ ಹ್ಯಾಂಡ್ ಪೋಸ್ಟ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಗ್ಯಾಸ್ ಲಾರಿಗೆ ಕುದುರೆಯೊಂದು ರಸ್ತೆಯಲ್ಲಿ ಏಕಾಏಕಿ ಅಡ್ಡಬಂದ ಪರಿಣಾಮ ವಾಹನಗಳ ಸರಣಿ ಅಪಘಾತ ಸಂಭವಿಸಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಸೋಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಚೋವಹಳ್ಳಿ ಗೇಟ್ ಬಳಿ ಕುದುರೆ ರಸ್ತೆಗೆ ಅಡ್ಡಬಂದ ಹಿನ್ನೆಲೆಯಲ್ಲಿ ಕುದುರೆಗೆ ಗುದ್ದಿ ಬ್ರೇಕ್ ಹಾಕಿದ ಗ್ಯಾಸ್ ಲಾರಿ ಹಿಂದೆ ಬರುತ್ತಿದ್ದ ಕಾರು ಮತ್ತು ಕೆಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದುಕೊಂಡು ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಐವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕುದುರೆಗೂ ಗಂಭೀರ ಗಾಯಗಳಾಗಿವೆ. ಕುದುರೆಯನ್ನು ಮಾಲೀಕ ರಸ್ತೆಗೆ ಬಿಟ್ಟಿದ್ದರಿಂದಲೇ ಅವಘಡಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೋಟೊ 17ಮಾಗಡಿ3 :ರಾಷ್ಟ್ರೀಯ ಹೆದ್ದಾರಿ ಬಳಿ ಅಪಘಾತದಿಂದ ಗಾಯಗೊಂಡಿರುವ ಕುದುರೆ.