ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಹುಲಿಕೆರೆ ಗ್ರಾಮದ ಮಂಚೇಗೌಡನ ಪುತ್ರ ಶಂಕರ (40) ಹಾಗೂ ಜೋಗಯ್ಯನ ಪುತ್ರ ವೀರೇಂದ್ರ (44) ಅಪಘಾತದಲ್ಲಿ ಮೃತಪಟ್ಟವರು.

ಕನ್ನಡಪ್ರಭ ವಾರ್ತೆ ಮದ್ದೂರುಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸೇರಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಯರಗನಹಳ್ಳಿ ಬಳಿಯ ತುಮಕೂರು - ಮದ್ದೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಜರುಗಿದೆ.ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಹುಲಿಕೆರೆ ಗ್ರಾಮದ ಮಂಚೇಗೌಡನ ಪುತ್ರ ಶಂಕರ (40) ಹಾಗೂ ಜೋಗಯ್ಯನ ಪುತ್ರ ವೀರೇಂದ್ರ (44) ಅಪಘಾತದಲ್ಲಿ ಮೃತಪಟ್ಟವರು. ತೊರೆಶೆಟ್ಟಿಹಳ್ಳಿಯಲ್ಲಿ ಪುಟ್ಟಾಚಾರಿ ಅವರ ತಿಥಿ ಕಾರ್ಯದಲ್ಲಿ ಪಾಲ್ಗೊಳ್ಳಲು ಕೊತ್ತತ್ತಿ ಹುಲಿಕೆರೆ ಗ್ರಾಮದಲ್ಲಿ ಪೇಪರ್ ಹಾಕುವ ಜೊತೆಗೆ ಕೇಬಲ್ ಆಪರೇಟರ್ ಆಗಿದ್ದ ಶಂಕರ ಹಾಗೂ ಕಟಿಂಗ್ ಶಾಪ್ ನಡೆಸುತ್ತಿದ್ದ ವೀರೇಂದ್ರ ಸ್ವಗ್ರಾಮದಿಂದ ಬೈಕ್‌ನಲ್ಲಿ ಬಂದಿದ್ದರು. ತಿಥಿ ಕಾರ್ಯ ಮುಗಿಸಿ ವಾಪಸ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಕೊನೆ ಉಸಿರೆಳೆದಿದ್ದಾರೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣ ಹಾನಿಗೊಂಡಿದ್ದು, ಇದರಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಉಂಟಾಗಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕೆಸ್ತೂರು ಠಾಣೆ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಲಾರಿ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಯಶವಂತ ಕುಮಾರ್ ಹಾಗೂ ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾರಾಯಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ----------------23ಕೆಎಂಎನ್ ಡಿ14,15 ಶಂಕರ ವೀರೇಂದ್ರ