ಬಂಟ್ವಾಳ : ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಟಿಪ್ಪರ್ ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಧರ್ಮಸ್ಥಳ ಪರಿಸರ ನಿವಾಸಿ ಮಹೇಶ್ ಮೃತರು.
ಬಾಕ್ರೈಟ್ ಕೋರೆಯ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ವೈಫಲ್ಯವನ್ನು ಸರಿಪಡಿಸಲು ಚಾಲಕ ಮಹೇಶ್ ಲಾರಿ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾಗ ಏಕಾಏಕಿ ಲಾರಿ ಮುಂದೆ ಚಲಿಸಿದ್ದರಿಂದ ಅವರು ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.---------------------------
ನೂತನ ವಿದ್ಯಾರ್ಥಿಗಳ ಪದಗ್ರಹಣನಾಪೋಕ್ಲು: ಇಲ್ಲಿನ ಅಂಕುರ್ ಪಬ್ಲಿಕ್ ಶಾಲೆಯಲ್ಲಿ ನೂತನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ ಶಾಲಾ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಯಿತು. ಶಾಲೆಯ ವಿದ್ಯಾರ್ಥಿ ಪರಿಷತ್‌ನ ಸದಸ್ಯರನ್ನು ಅಧಿಕೃತವಾಗಿ ಆಯ್ಕೆ ಮಾಡಿ ಅವರಿಗೆ ಬ್ಯಾಡ್ಜ್ ಮತ್ತು ಹೊಣೆಗಾರಿಕೆಯ ಚಿಹ್ನೆ ನೀಡಲಾಯಿತು. ಶಾಲಾ ನಾಯಕ ಗೇಲ್ ಪೊನ್ನಣ್ಣ, ನಾಯಕಿ ರಿಚ್ಚ ಪೂಣಚ್ಚ, ಕ್ರೀಡಾ ನಾಯಕ ಲಿತನ್ ಪೂಣಚ್ಚ, ನಾಯಕಿ ಶ್ರಾವ್ಯ ಮುತ್ತಮ್ಮ ಹಾಗೂ ವಿವಿಧ ಸದನಗಳ ನಾಯಕರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಶಾಲೆಯ ಅಧ್ಯಕ್ಷ ಕೇಟೋಳಿರ ರಾಜ ಚರ್ಮಣ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯಿನಿ ಮಮತಾ ಶುಭ ಹಾರೈಸಿದರು . ಶಿಕ್ಷಕಿ ಆಶಾ ಬೋಪಣ್ಣ ಹಾಗೂ ಸಿಬ್ಬಂದಿ ಹಾಜರಿದ್ದರು.