ಮುಧೋಳ ನಗರದ ಶ್ರೀ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಅಡಿಯಲ್ಲಿ ಭಾನುವಾರ ಕಾಲೇಜಿನ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಮುಧೋಳ

ಕನ್ನಡದ ಪ್ರೀತಿ ಕೇವಲ ನವೆಂಬರ್ ತಿಂಗಳ ಆಚರಣೆಗೆ ಸೀಮಿತವಾಗದೆ, ನಮ್ಮ ದೈನಂದಿನ ಮಾತು, ಶಿಕ್ಷಣ, ತಂತ್ರಜ್ಞಾನ ಹಾಗೂ ಮುಂದಿನ ಪೀಳಿಗೆಯ ಬದುಕಿನಲ್ಲಿ ಸದಾ ಜೀವಂತವಾಗಿರಬೇಕೆಂದು ಮುಧೋಳ ಶ್ರೀ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಜರಕುಂಟಿ ಹೇಳಿದರು.

ನಗರದ ಶ್ರೀ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಅಡಿಯಲ್ಲಿ ಭಾನುವಾರ ಕಾಲೇಜಿನ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ- 2026ರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ, ಕನ್ನಡಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕ. ಏಕೀಕರಣದ ಹೋರಾಟ ಹಾಗೂ ಶ್ರೀಮಂತ ಸಾಹಿತ್ಯ ಪರಂಪರೆ ನಮ್ಮ ನಾಡಿನ ಹೆಮ್ಮೆ. ಜಾಗತೀಕರಣದ ಯುಗದಲ್ಲಿ ಇತರ ಭಾಷೆಗಳನ್ನು ಕಲಿಯುತ್ತಲೇ ಮಾತೃಭಾಷೆಯ ಬೇರುಗಳನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕನ್ನಡಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕ. ಏಕೀಕರಣದ ಹೋರಾಟ ಹಾಗೂ ಶ್ರೀಮಂತ ಸಾಹಿತ್ಯ ಪರಂಪರೆ ನಮ್ಮ ನಾಡಿನ ಹೆಮ್ಮೆ. ಜಾಗತೀಕರಣದ ಯುಗದಲ್ಲಿ ಇತರ ಭಾಷೆಗಳನ್ನು ಕಲಿಯುತ್ತಲೇ ಮಾತೃಭಾಷೆಯ ಬೇರುಗಳನ್ನು ಉಳಿಸಿಕೊಳ್ಳಬೇಕು ಎಂದರು.

ಜಮಖಂಡಿ ಸರ್ಕಾರಿ ಪ್ರಥಮ ಧರ್ಜೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮಹಾಂತೇಶ ಪಟ್ಟಣಶೆಟ್ಟಿ ಉಪನ್ಯಾಸ ನೀಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಲ್ಹಾದ ಕೆ. ವೇದಿಕೆ ಮೇಲೆ ಉಪಸ್ಥಿತರಿದ್ದರು, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎಲ್.ಎಂ.ಕಲ್ಯಾಣಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು, ಕನ್ನಡ ಸಂಘದ ಸಂಚಾಲಕ ಪ್ರೊ.ವೀರಣ್ಣ ಕಿತ್ತೂರ ವಂದಿಸಿದರು, ಡಾ.ರವೀಂದ್ರ ಕತ್ತಿ ನಿರೂಪಿಸಿದರು, ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆ ಮತ್ತು ನಾಡಗೀತೆ ಹೇಳಿದರು.