ಸಾರಾಂಶ
ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದ್ದು, ಪೊಲೀಸರ ಭಯ ಇಲ್ಲದಿರುವುದೇ ಇಂಥ ಪ್ರಕರಣ ಹೆಚ್ಚಾಗಲು ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದ್ದು, ಪೊಲೀಸರ ಭಯ ಇಲ್ಲದಿರುವುದೇ ಇಂಥ ಪ್ರಕರಣ ಹೆಚ್ಚಾಗಲು ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ಎಂದು ವಿಷಾಧಿಸಿದ್ದಾರೆ..
ಈ ಘಟನೆ ನಡೆದು ಒಂದು ವಾರ ಕಳೆದರೂ ಪ್ರಕರಣದಲ್ಲಿ ಬಂಧಿತನಾಗಿರುವ ನಯಾಜ್ ಎನ್ನುವ ಪ್ರಮುಖ ಆರೋಪಿಯ ರಕ್ಷಣೆಗೆ ದೊಡ್ಡ ಮಟ್ಟದ ಕಸರತ್ತು ನಡೆದಂತೆ ಕಾಣಿಸುತ್ತದೆ. ಸ್ವಾತಿಯನ್ನು ಪ್ರೀತಿಸುವ ನಾಟಕವಾಡಿ ಅನ್ಯ ಧರ್ಮದವಳೆಂದು ತಿರಸ್ಕರಿಸಿ ತನ್ನ ಧರ್ಮದ ಬೇರೆ ಯುವತಿಯ ಜತೆ ಮದುವೆ ಮಾಡಿಕೊಳ್ಳಲು ತೀರ್ಮಾನಿಸಿದ್ದನ್ನು ಪ್ರಶ್ನಿಸಿರುವುದಕ್ಕೆ ಸ್ವಾತಿಯ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ.
ಹೆಣ್ಣುಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಸ್ವಾತಿ ಹತ್ಯೆ ಪ್ರಕರಣ ಲವ್ ಜಿಹಾದ್: ಮುತಾಲಿಕ್
ಹಾವೇರಿ: ರಟ್ಟಿಹಳ್ಳಿ ತಾಲೂಕಿನ ಮಾಸೂರಿನ ಯುವತಿ ಸ್ವಾತಿ ಹತ್ಯೆ ಪ್ರಕರಣ ಲವ್ ಜಿಹಾದ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆಗ್ರಹಿಸಿದರು.
ಶುಕ್ರವಾರ ಎಸ್‌ಪಿ ಅಂಶುಕುಮಾರ್ ಭೇಟಿಯಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಇನ್ನಷ್ಟು ತೀವ್ರಗತಿಯ ತನಿಖೆ ನಡೆಸಬೇಕು.
ತಲೆಮರೆಸಿಕೊಂಡಿರುವ ಉಳಿದ ಇಬ್ಬರು ಆರೋಪಿಗಳಾದ ವಿನಯ್, ದುರ್ಗಾಚಾರಿಯನ್ನು ಬಂಧಿಸಬೇಕು. ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಉದ್ದೇಶ ಇದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಒತ್ತಾಯಿಸಿದರು.
ಲವ್ ಜಿಹಾದ್ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿವೆ. ನಯಾಜ್ ಜತೆ ಸ್ವಾತಿಗೆ ಪ್ರೀತಿ ಇತ್ತು ಎಂದು ಊರಿನವರಿಗೂ, ಮನೆಯವರಿಗೂ ಗೊತ್ತಿದೆ. ನಯಾಜ್ ಬೇರೆ ಮದುವೆ ಆಗುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಹಿನ್ನೆಲೆ ಇಬ್ಬರ ಮಧ್ಯೆ ಜಗಳ ಅಗಿ ಕೊಲೆಯಲ್ಲಿ ಅಂತ್ಯ ಕಂಡಿದೆ ಎಂದರು.