ಮಕ್ಕಳಲ್ಲಿ ಮಾತೃಭಾಷಾ ಅಭಿಮಾನ ಬೆಳೆಸಬೇಕು: ಸಚಿವ ಮುನಯಪ್ಪ

| Published : Nov 02 2024, 01:17 AM IST

ಮಕ್ಕಳಲ್ಲಿ ಮಾತೃಭಾಷಾ ಅಭಿಮಾನ ಬೆಳೆಸಬೇಕು: ಸಚಿವ ಮುನಯಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ದೇವನಹಳ್ಳಿ: ಕನ್ನಡನಾಡು ರನ್ನ, ಪಂಪರು ಜನಿಸಿದ ಪುಣ್ಯ ಬೀಡು, ರಾಷ್ಟ್ರಕವಿ ಕುವೆಂಪು, ವರಕವಿ ಬೇಂದ್ರೆ, ಕಡಲ ತೀರದ ಭಾರ್ಗವ ಶಿವರಾಮ ಕಾರಾಂತ ಅನೇಕ ಪುಣ್ಯಪುರುಷರು ಜನಿಸಿ, ಕನ್ನಡಕವಿಗಳಿಗೆ 8 ಜ್ಞಾನ ಪೀಠ ಪ್ರಸಸ್ತಿಗಳು ಲಭಿಸಿರುವುದು ಹೆಮ್ಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 69ನೇ ಕನ್ನಡ ರಾಜ್ಯೊತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಪೋಲಿಸರು ಹಾಗೂ ವಿದ್ಯಾರ್ಥಿಗಳಿಂದ ಧ್ವಜವಂದನೆ ಸ್ವೀಕರಿಸಿ ಅವರು ಮಾತನಾಡಿದರು.

1950ರಲ್ಲಿ ಭಾರತ ಗಣರಾಜ್ಯವಾದ ಬಳಿಕ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪುಗೊಂಡವು. ಕನ್ನಡ ಭಾಷೆ ಮಾತನಾಡುವ ಪ್ರಾಂತಗಳು ಸೇರಿ ಮೈಸೂರು ರಾಜ್ಯ ಉದಯವಾಯಿತು.ಈಗ ಚೆಲುವ ಕನ್ನಡ ನಾಡಾಗಿದೆ. ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆ. ಮಕ್ಕಳಿಗೆ ಮಾತೃಭಾಷಾ ಕಲಿಕೆ ಹಾಗೂ ಭಾಷಾಭಿಮಾನ ಬೆಳೆಸುವುದು ಮುಖ್ಯ. ಕನ್ನಡ ಕಲಿಕೆಯನ್ನು ಕಡ್ಡಾಯವಾಗಿ ಹೇರುವ ಪರಿಸ್ಥಿತಿ ಬದಲಾಗಿ ನಮ್ಮ ಮಾತೃ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕಾಯಕದಲ್ಲಿ ಪ್ರತಿಯೊಬ್ಬರೂ ಕಂಕಣಬದ್ದವಾಗಿ ಕಾರ್ಯ ನಿರ್ವಹಿಸಿದರೆ ಕನ್ನಡಿಗರಲ್ಲದವರು ನಮ್ಮ ಭಾಷೆಯನ್ನು ಪ್ರೀತಿಸಿ ಅಳವಡಿಸಿಕೊಳ್ಳುತ್ತಾರೆ ಎಂದರು.

ಸಮಾರಂಭದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್‌, ಬಯಪ ಅಧ್ಯಕ್ಷ ಶಾಂತಕುಮಾರ್‌, ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ, ಜಿಲ್ಲಾಧಿಕಾರಿ ಡಾ.ಶಿವಶಂಕರ, ಜಿಪಂ ಸಿಇಒ ಡಾ. ಅನುರಾಧ, ತಹಸೀಲ್ದಾರ್‌ ಬಾಲಕೃಷ್ಣ, ತಾಪಂ ಇಒ ಶ್ರೀನಾಥಗೌಡ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

(ಒಂದು ಫೋಟೋ ಬಳಸಿ)