ಪ್ರೇಮಿಗಳ ದಿನದಂದೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

| Published : Feb 15 2025, 12:33 AM IST

ಸಾರಾಂಶ

ಕಡೂರುಪ್ರೇಮಿಗಳ ದಿನದಂದೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸಾಕ್ಷೀಕರಿಸಿಕೊಂಡು ಪ್ರೇಮಿಗಳು ಸತಿಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಘಟನೆ ಕಡೂರು ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.

ಕನ್ನಡಪ್ರಭ ವಾರ್ತೆ, ಕಡೂರು

ಪ್ರೇಮಿಗಳ ದಿನದಂದೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸಾಕ್ಷೀಕರಿಸಿಕೊಂಡು ಪ್ರೇಮಿಗಳು ಸತಿಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಘಟನೆ ಕಡೂರು ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.ಪರಸ್ಪರ ಪ್ರೀತಿಸುತ್ತಿದ್ದ ಕಡೂರು ತಾಲೂಕಿನ ಯಗಟಿ ಗ್ರಾಮದ ದಲಿತ ಸಮುದಾಯದ ಕುಮಾರ್ ಎಂಬುವ ಯುವಕ ಮತ್ತು ಅರಸೀಕೆರೆ ತಾಲೂಕಿನ ಪುರಲೇಹಳ್ಳಿಯ ಬಂಜಾರ ಸಮುದಾಯದ ಸುಚಿತ್ರಾ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟವರು.

ಅವರು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಇವರು ಪ್ರೇಮಿಗಳ ದಿನ ದಂದೆ ಶುಕ್ರವಾರ ಕಡೂರು ಪಟ್ಟಣದ ಮರವಂಜಿ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಮುಂದೆ ಪರಸ್ಪರ ಹಾರ ಬದಲಾಯಿಸಿ ಕೊಳ್ಳುವ ಮೂಲಕ ಸ್ನೇಹಿತರು, ಹಿತೈಷಿಗಳ ಸಮ್ಮುಖದಲ್ಲಿ ಅಂಬೇಡ್ಕರ್ ರನ್ನು ಸಾಕ್ಷಿಕರಿಸಿಕೊಂಡು ನವ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೇಮಿಗಳ ದಿನವನ್ನು ಆಚರಿಸಿಕೊಂಡರು.

ನೂತನ ದಂಪತಿಗೆ ಶುಭ ಹಾರೈಸಿದ ಜಿಗಣೇಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮತ್ತು ಕಡೂರು ಬಿಜೆಪಿ ಮಂಡಲದ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಮಾತನಾಡಿ, ಪರಸ್ಪರ ಪ್ರೀತಿ ಮಾಡುತ್ತಿದ್ದ ಯುವ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಪ್ರೇಮಿಗಳ ದಿನದಂದೇ ಸತಿಪತಿಗಳಾಗಿ ಬದುಕಿನ ಹೊಸ ಖಾತೆ ತೆರೆದಿರುವುದು ಸಂಭ್ರಮದ ವಿಚಾರ ಎಂದರು. ಮುಂದಿನ ಭವಿಷ್ಯ ಉಜ್ವಲವಾಗಿರಲಿ ಇಬ್ಬರೂ ಸಮಾಜಕ್ಕೆ ಮಾದರಿಯಾಗಿ ಬದುಕಿ ತೋರಿಸಬೇಕು ಎಂದು ಕಿವಿಮಾತು ಹೇಳಿದರು.ಈ ಜೋಡಿಯನ್ನು ಒಂದುಗೂಡಿಸಲು ಹಲವು ಮುಖಂಡರು ಕೈಗೂಡಿಸಿದ್ದು, ಮಾದಿಗ ಸಮಾಜದ ತಾಲೂಕು ಪ್ರಧಾನ ಕಾರ್ಯದರ್ಶಿ ದೊಡ್ಡಘಟ್ಟ ಗಂಗರಾಜ್ ಮಾದಿಗ ಸಮಾಜದ ಮಾಜಿ ಅಧ್ಯಕ್ಷ ವಾಸು ಸಮಾಜ ಮುಖಂಡರಾದ ಜಗದೀಶ್‌, ಸಗುನಪ್ಪ,ನಾರಾಯಣಸ್ವಾಮಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದು ಯುವ ಜೋಡಿಗೆ ಶುಭ ಕೋರಿದರು.

14ಕೆಕೆಡಿಯು1.