ಬಿಜೆಪಿಗೆ ನಿಷ್ಠಾವಂತ ಕಾರ್ಯಕರ್ತರು ಬಲಿಷ್ಠ ಶಕ್ತಿ

| Published : Oct 14 2025, 01:00 AM IST

ಸಾರಾಂಶ

ಬಿಜೆಪಿಗೆ ನಿಷ್ಠಾವಂತ ಕಾರ್ಯಕರ್ತರು ಬಲಿಷ್ಠ ಶಕ್ತಿಯಾಗಿದ್ದು, ಕಾರ್ಯಕರ್ತರ ಸದೃಢ ಸಂಕಲ್ಪದಿಂದ ಮಾತ್ರ ಚುನಾವಣೆಯಲ್ಲಿ ಪಕ್ಷ ಜಯ ಸಾಧಿಸಲು ಸಾಧ್ಯ. ಈ ದಿಸೆಯಲ್ಲಿ ಬರಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿ ತಾಲೂಕು, ಜಿಲ್ಲೆಯನ್ನು ಬಿಜೆಪಿ ಭದ್ರ ಕೋಟೆ ಎಂಬುದನ್ನು ಪುನಃ ಸಾಬೀತುಪಡಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಶಿಕಾರಿಪುರ: ಬಿಜೆಪಿಗೆ ನಿಷ್ಠಾವಂತ ಕಾರ್ಯಕರ್ತರು ಬಲಿಷ್ಠ ಶಕ್ತಿಯಾಗಿದ್ದು, ಕಾರ್ಯಕರ್ತರ ಸದೃಢ ಸಂಕಲ್ಪದಿಂದ ಮಾತ್ರ ಚುನಾವಣೆಯಲ್ಲಿ ಪಕ್ಷ ಜಯ ಸಾಧಿಸಲು ಸಾಧ್ಯ. ಈ ದಿಸೆಯಲ್ಲಿ ಬರಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿ ತಾಲೂಕು, ಜಿಲ್ಲೆಯನ್ನು ಬಿಜೆಪಿ ಭದ್ರ ಕೋಟೆ ಎಂಬುದನ್ನು ಪುನಃ ಸಾಬೀತುಪಡಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಪಟ್ಟಣದ ಮಾಳೇರಕೇರಿಯಲ್ಲಿನ ಬಿಜೆಪಿ ಕಚೇರಿಯಲ್ಲಿ ಸಹಕಾರ ಯೂನಿಯನ್‌ನಲ್ಲಿ ಜಯಗಳಿಸಿದ ನೂತನ ನಿರ್ದೇಶಕರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿನ ಸಂಸ್ಕಾರದಿಂದಾಗಿ ಪ್ರಧಾನಿ ಮೋದಿರವರ ಆಡಳಿತದಲ್ಲಿ ಭಾರತದತ್ತ ಜಗತ್ತು ನೋಡುವ ರೀತಿ ಅಭಿವೃದ್ಧಿ ಕಾಣುತ್ತಿದ್ದು, 2047ಕ್ಕೆ ಪ್ರಪಂಚದಲ್ಲಿ ಭಾರತ ಅಭಿವೃದ್ಧಿ ಹೊಂದಿದ ಬಲಿಷ್ಠ ದೇಶವಾಗಿ ಹೊರಹಮ್ಮ ಬೇಕಾಗಿದೆ. ಈ ದಿಸೆಯಲ್ಲಿ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿಜಿ ಆತ್ಮ ನಿರ್ಭರ ಭಾರತ್ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು . ತಾಲೂಕಿನ ಶಿರಾಳಕೊಪ್ಪದಲ್ಲಿ ಇದೇ ನ.1ರಂದು ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವ ಮೂಲಕ ಪಥಸಂಚಲನ ಯಶಸ್ಸಿಗೆ ಶ್ರಮಿಸುವಂತೆ ಕೋರಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸಹಕಾರಿ ಕ್ಷೇತ್ರದಿಂದ ರಾಜಕೀಯ ಜೀವನ ಆರಂಭಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದು ಸಂಘಟನೆಯಿಂದ ಎಂದ ಅವರು, ಬರಲಿರುವ ಟಿಎಪಿಸಿಎಂಎಸ್ ಚುನಾವಣೆಯನ್ನು ಸಂಕಟನಾತ್ಮಕವಾಗಿ ಎದುರುಸಿ ಎಲ್ಲರೂ ಜಯ ಸಾಧಿಸಬೇಕು ಎಂದರು.

ಕಳೆದ 40 ವರ್ಷಗಳಿಂದ ತಾಲೂಕಿನ ಟಿಎಪಿಸಿಎಂಎಸ್ ಬಿಜೆಪಿ ಬೆಂಬಲಿತ ಸದಸ್ಯರ ವಶದಲ್ಲಿದ್ದು ಪುನಃ ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮುಂದಿದೆ ಎಂದು ಹೇಳಿದರು.

ಇದೇ ವೇಳೆ ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಜಯಗಳಿಸಿದ ಹಾಗೂ ಪರಾಜಿತ ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು.ತಾ.ಬಿಜೆಪಿ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಪುರಸಭಾ ಅಧ್ಯಕ್ಷೆ ಸುನಂದ ಮಂಜುನಾಥ್, ಜಿಪಂ ಮಾಜಿ ಸದಸ್ಯ ಹಾಲಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ, ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ಕೆ.ಪಿ.ಮಂಜುನಾಥ್, ಹಿರಿಯ ಸ್ವಯಂಸೇವಕ ಎಸ್.ಬಿ.ಮಠದ್, ಡಾ.ಬಿ.ಡಿ.ಭೂಕಾಂತ್, ಅಗಡಿ ಅಶೋಕ್, ಡಿ.ಎಲ್.ಬಸವರಾಜ್, ರುದ್ರಮನಿ, ಶಿವಪ್ಪ ಬಿಎಸ್‌ಎನ್‌ಎಲ್ ಮತ್ತಿತರರು ಉಪಸ್ಥಿತರಿದ್ದರು.