ಸಾರಾಂಶ
ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ ಪಿಎಸ್ಐಯನ್ನು ಅಮಾನತು ಮಾಡುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಬೆಳಗಾವಿ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ ಪಿಎಸ್ಐಯನ್ನು ಅಮಾನತು ಮಾಡುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಬೆಳಗಾವಿ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ರಾಮನಗರ ಜಿಲ್ಲಾ ವಕೀಲರ ಸಂಘದ 40 ಮಂದಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ಐಜೂರು ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ತನ್ವೀರ್ ಹುಸೇನ್ ಅಮಾನತು ಮಾಡಬೇಕು. ರಾಮನಗರದಲ್ಲಿ ನಡೆದಿರುವ ಘಟನೆ ವಕೀಲರ ಮೇಲೆ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸಿಕೊಂಡು ಕಿರುಕುಳ ನೀಡಬೇಕು ಎಂಬ ಉದ್ದೇಶ ಇದರ ಹಿಂದಿದೆ. ಮೊದಲು ಪಿಎಸ್‌ಐ ಅಮಾನತು ಮಾಡಿ ನೀವು ಮುಂದಿನ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬೆಳಗಾವಿಯ ನೂರಾರು ಜನ ವಕೀಲರು ಭಾಗಿಯಾಗಿದ್ದರು.
-------------