ಸುಳ್ಳು ಹೇಳುವುದೇ ಬಿಜೆಪಿಯ ಮಂತ್ರ: ಸತೀಶ ಜಾರಕಿಹೊಳಿ

| Published : Mar 29 2024, 12:46 AM IST / Updated: Mar 29 2024, 03:17 PM IST

ಸಾರಾಂಶ

ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಬುಧವಾರ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಪಾಲಬಾವಿ, ಸುಲ್ತಾನಪುರ, ಕಪ್ಪಲಗುದ್ದಿ, ಹಂದಿಗುಂದ, ಮರಾಕುಡಿ ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಸಚಿವ ಸತೀಶ ಜಾರಕಿಹೊಳಿ ಭೇಟಿ ಮಾಡಿ ಮತಯಾಚಿಸಿದರು.

ಕನ್ನಡಪ್ರಭ ವಾರ್ತೆ ಪಾಲಬಾವಿ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುಡಚಿ ಮತಕ್ಷೇತ್ರದ ಭಾಜಪ ಅಭ್ಯರ್ಥಿ ಪಿ.ರಾಜೀವ್ ಅವರನ್ನು ಸೋಲಿಸಿದಂತೆ, ಸಂಸದ ಅಣ್ಣಾಸಾಹೇಬ ಜೊಲ್ಲೆಯವರನ್ನು ಸೋಲಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಬುಧವಾರ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಪಾಲಬಾವಿ, ಸುಲ್ತಾನಪುರ, ಕಪ್ಪಲಗುದ್ದಿ, ಹಂದಿಗುಂದ, ಮರಾಕುಡಿ ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿ, ಭಾರತೀಯ ಜನತಾ ಪಕ್ಷವೂ ಕಳೆದ ಹತ್ತು ವರ್ಷಗಳಿಂದ ಸುಳ್ಳಿನ ಕಂತೆಗಳನ್ನು ಹೇಳುತ್ತ ದೇಶದ ಜನರನ್ನು ಯಾಮಾರಿಸುತ್ತ ಬಂದಿದೆ. ಸುಳ್ಳು ಹೇಳುವುದೇ ಬಿಜೆಪಿಯ ಮಂತ್ರವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಶಾಸಕ ಮಹೇಂದ್ರ ತಮ್ಮಣ್ಣವರ ಮಾತನಾಡಿದರು. ಈ ವೇಳೆ ಮಾಜಿ ಶಾಸಕ ಎಸ್.ಬಿ. ಘಾಟಗೆ, ಚಿಂತಕ ಜಿಪಂ ಮಾಜಿ ಸದಸ್ಯ ಡಿ.ಎಸ್. ನಾಯಿಕ, ವಿಶ್ರಾಂತ ಮುಖ್ಯಶಿಕ್ಷಕ ಚಂದ್ರಯ್ಯ ಹಿರೇಮಠ, ಜಿಪಂ ಮಾಜಿ ಸದಸ್ಯ ಡಾ.ಸಿ.ಬಿ.ಕುಲಿಗೋಡ, ಕಾಂಗ್ರೆಸ್ ಪಕ್ಷದ ಓಬಿಸಿ ಜಿಲ್ಲಾ ಘಟಕದ ಅಧ್ಯಕ್ಷ ಅರ್ಜುನ ನಾಯಕವಾಡಿ, ಚಿಕ್ಕೋಡಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ನಿರ್ಮಲಾ ಪಾಟೀಲ, ಕುಡಚಿ ಬ್ಲಾಕ್ ಅಧ್ಯಕ್ಷ ಪ್ರದೀಪ ಹಾಲ್ಗುಣಿ, ರಾಮಣ್ಣ ಗಸ್ತಿ ಉಪಸ್ಥಿತರಿದ್ದರು.