M.D. Nanjundaswamy Award for Farmer activist Satyampet
ಕನ್ನಡಪ್ರಭ ವಾರ್ತೆ ಯಾದಗಿರಿ
ಕರ್ನಾಟಕ ಸೇನೆ ಸಂಘಟನೆಯಿಂದ ಹಿರಿಯ ರೈತ ಹೋರಾಟಗಾರ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಅವರಿಗೆ ಪ್ರೊ. ಎಂ.ಡಿ ನಂಜುಂಡಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಸಂಘದ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾವೇಶದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ ರಾಜುಗೌಡ, ಸಂಘದ ರಾಜ್ಯಾಧ್ಯಕ್ಷ ಬಸವರಾಜ ಪಡುಕೋಟೆ, ಡಾ. ರಾಜಕುಮಾರ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಸಾ.ರಾ ಗೋವಿಂದ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಾಸಕ ಅಶ್ವತ್ಥನಾರಾಯಣ, ಎನ್. ಎ. ಹ್ಯಾರಿಸ್, ಡಿಎಸ್ ಮ್ಯಾಕ್ಸ್ ನಿರ್ದೇಶಕ ದಯಾನಂದ್, ಕನ್ನಡಪ್ರಭ ಪ್ರಧಾನ ಸಂಪಾದಕರಾದ ರವಿ ಹೆಗಡೆ, ಚಲನಚಿತ್ರ ನಿರ್ದೇಶಕ ತರುಣ ಸುಧೀರ್, ಶರಣ ಸಾಹಿತ್ಯ ಪರಿಷತ್ತಿನ ಯುವ ಘಟಕದ ರಾಜ್ಯ ಸಂಚಾಲಕ ಪ್ರಕಾಶ ಅಂಗಡಿ ಕನ್ನೆಳ್ಳಿ, ಸಂಘಟನೆಯ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಪಡುಕೋಟೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
-19ವೈಡಿಆರ್7 : ನಮ್ಮ ಕರ್ನಾಟಕ ಸೇನೆ ಸಂಘಟನೆಯಿಂದ ಹಿರಿಯ ರೈತ ಹೋರಾಟಗಾರ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಅವರಿಗೆ ಪ್ರೊಫೆಸರ್ ಎಂ.ಡಿ ನಂಜುಂಡಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.