ಸಾರಾಂಶ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಪಕ್ಷದ ರಾಜ್ಯದ ಸಂಯೋಜಕ ಎಂ.ಕೃಷ್ಣಮೂರ್ತಿ ನಗರದ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಪಕ್ಷದ ರಾಜ್ಯದ ಸಂಯೋಜಕ ಎಂ.ಕೃಷ್ಣಮೂರ್ತಿ ನಗರದ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದಿಂದ ಮೆರವಣಿಗೆ ಹೊರಟು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ನಾಮಪತ್ರಸಲ್ಲಿಸಿದರು. ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ ಮುಖಂಡರಾದ ಹ.ರಾ.ಮಹೇಶ್, ಸಿ.ಮಹದೇವಯ್ಯ ಹಾಜರಿದ್ದರು.ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಲ್ಲಿ ಬಿ ಫಾರಂಗೆ ಕೋಟಿ ಕೋಟಿ ಕೊಡಬೇಕಿದೆ:
ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ, ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಸಂಯೋಜಕರಾದ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೇರೆಬೇರೆ ಪಕ್ಷದಲ್ಲಿ ಕಾಂಗ್ರೆಸ್, ಬಿಜೆಪಿಯಲ್ಲಿ ಬಿ.ಫಾರಂಗೆ ೧೦, ೨೦ ಕೋಟಿ ರು.ಕೊಡಬೇಕಿದೆ. ಮತದಾರರಿಗೆ ೧ ಸಾವಿರ, ೨ ಸಾವಿರ ಹಣ ನೀಡುತ್ತಿದ್ದಾರೆ.ಟಿವಿ, ಬಂಗಾರ ನೀಡುತ್ತಾರೆ ಅ ಸಂಸ್ಕೃತಿ ಬಿಎಸ್‌ಪಿಯಲ್ಲಿ ಇಲ್ಲ. ಒಂದು ನೋಟು, ಒಂದು ವೋಟ್ ಸಿದ್ದಾಂತದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು.ತಾಂತ್ರಿಕ ಸಮಸ್ಯೆಯಿಂದ ಅಭ್ಯರ್ಥಿ ಬದಲಾವಣೆ :ಪಕ್ಷದಿಂದ ಸಿ.ಮಹದೇವಯ್ಯ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು ತಾಂತ್ರಿಕ ಕಾರಣದಿಂದ, ಅವರ ಮೇಲೆ ಕ್ರಿಮಿನಲ್ ಪ್ರಕರಣ ಇರುವುದರಿಂದ ಪಕ್ಷದ ರಾಜ್ಯ ಸಂಯೋಜಕ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಿಣಕ್ಕಿಳಿಸಲಾ ಕಗಿದೆ. ಅವರನ್ನು ಕ್ಷೇತ್ರದ ಮತದಾರರು ಆಶೀರ್ವಾದಿಸುವ ಮೂಲಕ ಜಯಶೀಲರನ್ನಾಗಿ ಮಾಡಿ ತಮ್ಮ ಸೇವೆಗೆ ಮಾಡಲು ಅವಕಾಶ ಮಾಡಿಕೊಡು ಎಂದು ಮನವಿ ಮಾಡಿದರು.
ಬಿಎಸ್ಪಿ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಮಾತನಾಡಿ, ೨೦೦೧ ರಿಂದ ಚಾಮರಾಜನಗರ ಜಿಲ್ಲೆಯಲ್ಲಿ ನಿರಂತರ ಸಂಪರ್ಕ ಹೊಂದಿದ್ದೇನೆ. ಬಹುಜನ ಚಳವಳಿಯನ್ನು ಬಹಳ ತಳಮಟ್ಟದಿಂದ ಕಟ್ಟಿದ್ದೇನೆ. ವಿದ್ಯಾರ್ಥಿ ಸಂಘಟನೆ ಕಟ್ಟುವ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ಬಾಬಾ ಅಂಬೇಡ್ಕರ್ ಸಿದ್ಧಾಂತವನ್ನು ಸಮಾಜಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದೇನೆ. ಬಿಜೆಪಿ , ಕಾಂಗ್ರೆಸ್ ಅಭ್ಯರ್ಥಿಗಳಿಗಿಂತ ಕ್ಷೇತ್ರದ ಜನರಲ್ಲಿ ಉತ್ತಮ ಒಡನಾಟ ಇದೆ. ಜಿಲ್ಲೆಯು ಅಭಿವೃದ್ದಿಯಾಗಿಲ್ಲ. ಕ್ಷೇತ್ರದ ಅನೇಕ ಹಳ್ಳಿಗಳಲ್ಲಿ ಸ್ಮಶಾನ ಇಲ್ಲ. ನೀರಾವರಿ ಯೋಜನೆ ಪರಿಪೂರ್ಣವಾಗಿ ಮಾಡಿಲ್ಲ. ಅಕ್ರಮ ಗಣಿಗಾರಿಕೆ ಹೆಚ್ಚು ಇದೆ. ಇಲ್ಲಿನ ಸಂಪನ್ಮೂಲ ಹೊರ ರಾಜ್ಯಗಳ ಪಾಲಾಗುತ್ತಿದೆ.ಅದನ್ನು ಯಾರು ತಪ್ಪಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.ಬಹುಜನ ಸಮಾಜ ಪಕ್ಷವು ತಮ್ಮನ್ನು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು . ತಾಂತ್ರಿಕ ಕಾರಣದಿಂದ ಪಕ್ಷಕ್ಕೆ ಯಾವುದೇ ತೊಂದರೆಯಾಗಬಾರದೆಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ. ನನ್ನ ಬದಲಾಗಿ ಕೃಷ್ಣಮೂರ್ತಿ ಅವರನ್ನು ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿಸಲಾಗಿದೆ, ಅವರಿಗೆ ಸಂಪೂರ್ಣ ಬೆಂಬಲ ನೀಡಿ ಅವರ ಗೆಲುವಿಗೆ ಶ್ರಮಿಸುತ್ತೇನೆ.
ಸಿ.ಮಹದೇವಯ್ಯ, ನಿವೃತ್ತ ತಹಸೀಲ್ದಾರ್.