ಬಸವಣ್ಣನವರ ಸಮಕಾಲೀನರಾದ ಮಾಚಿದೇವರು 12ನೇ ಶತಮಾನದ ಸಮಾಜದಲ್ಲಿದ್ದ ಮೌಢ್ಯಗಳ ಕುರಿತು ವಚನದ ಮೂಲಕ ಅರಿವು ಮೂಡಿಸಿದ್ದಾರೆ
ಕುಷ್ಟಗಿ: 12ನೇ ಶತಮಾನದಲ್ಲಿ ವಚನ ರಚನೆ ಮಾಡುವ ಮೂಲಕ ಸಮಾಜದಲ್ಲಿದ್ದ ಮೌಢ್ಯ ಕುರಿತು ಜಾಗೃತಿ ಮೂಡಿಸುವಲ್ಲಿ ಮಾಚಿದೇವರು ಮಡಿವಾಳ ಪ್ರಮುಖರಾಗಿದ್ದಾರೆ ಎಂದು ಚುಟುಕು ಸಾಹಿತ್ಯ ಪರಿಷತ್ತು ತಾಲೂಕಾಧ್ಯಕ್ಷ ಮಹೇಶ ಹಡಪದ ಹೇಳಿದರು.
ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ಮಡಿವಾಳ ತಾಲೂಕಾಡಳಿತದಿಂದ ಭಾನುವಾರ ನಡೆದ ಶರಣ ಮಡಿವಾಳ ಮಾಚಿದೇವರ ಜಯಂತಿಯಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.ಬಸವಣ್ಣನವರ ಸಮಕಾಲೀನರಾದ ಮಾಚಿದೇವರು 12ನೇ ಶತಮಾನದ ಸಮಾಜದಲ್ಲಿದ್ದ ಮೌಢ್ಯಗಳ ಕುರಿತು ವಚನದ ಮೂಲಕ ಅರಿವು ಮೂಡಿಸಿದ್ದಾರೆ. ಜನಸಾಮಾನ್ಯರು ಮಡಿವಾಳ ಮಾಚಿದೇವರ ಬಗ್ಗೆ ಅರಿತು ತತ್ವ,ಆದರ್ಶ ಪಾಲಿಸಬೇಕು ಎಂದು ಹೇಳಿದರು.
ದುರ್ಬಲರ ಶೋಷಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪೃಶ್ಯತೆ, ಮೂಢನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇದನ್ನು ಮನಗಂಡ ಶರಣ ಮಡಿವಾಳ ಮಾಚಿದೇವರು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಒದಗಿಸಿಕೊಡಲು ಸಾಮಾಜಿಕ ಕ್ರಾಂತಿ ಕೈಗೊಂಡರು. ಇಂತಹ ಶರಣರ ತತ್ವ, ಸಿದ್ಧಾಂತ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಗ್ರೇಡ್ 2 ತಹಸೀಲ್ದಾರ ರಜನಿಕಾಂತ ಮಾತನಾಡಿ, ಮಡಿವಾಳ ಮಾಚಿದೇವರು ಒಂದು ವರ್ಗಕ್ಕೆ ಸೀಮಿತವಲ್ಲ. ಅವರ ವಚನ, ಸಾಮಾಜಿಕ ಚಿಂತನೆಗಳು ಇಂದಿನ ಯುವಕರಿಗೆ ಮಾದರಿಯಾಗಿದ್ದು, ಅವರ ವಚನಗಳ ಅರ್ಥ ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಬದುಕು ನಮ್ಮದಾಗಲಿದೆ ಎಂದರು.
ಈ ಸಂದರ್ಭ ಶಿರಸ್ತೆದಾರ ಅನಂತಮೂರ್ತಿ, ಸತ್ಯಪ್ಪ ಮಡಿವಾಳರ, ಚಿದಾನಂದಪ್ಪ ಮಡಿವಾಳರ, ಶಿವಲಿಂಗಪ್ಪ ಮಡಿವಾಳರ, ಅಶೋಕ ಮಡಿವಾಳರ, ಬಸವರಾಜ ಮಡಿವಾಳರ, ವಿರುಪಾಕ್ಷಪ್ಪ ಮಡಿವಾಳರ ಸೇರಿದಂತೆ ಅನೇಕರು ಇದ್ದರು. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.