ಮಡಬಲಿನ ಶಿಕ್ಷಕ ಪರಮೇಶ್‌ಗೆ ಆದರ್ಶ ಶಿಕ್ಷಕ ಪ್ರಶಸ್ತಿ

| Published : Aug 26 2024, 01:40 AM IST

ಸಾರಾಂಶ

ಪರಮೇಶ್ ವೃತ್ತಿಯಲ್ಲಿ ಶಿಕ್ಷಕರಾಗಿ ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯದ ಹವ್ಯಾಸವನ್ನು ಮೈಗೂಡಿಸಿಕೊಂಡಿದ್ದು,, ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಲೇಖನಗಳು, ವೈಜ್ಞಾನಿಕ ಲೇಖನಗಳು, ವಿಮರ್ಶಾ ಲೇಖನಗಳು, ಕಥೆ, ಕವಿತೆಗಳನ್ನು ಬರೆದಿದ್ದಾರೆ. ಈಗಾಗಲೇ ಎಂಟು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ. ಶಿಕ್ಷಣ ಇಲಾಖೆಯ ಹಲವು ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಶೈಕ್ಷಣಿಕ ಹಾಗೂ ಸಾಹಿತ್ಯಾತ್ಮಕ ಕಾರ್ಯವನ್ನು ಪರಿಗಣಿಸಿ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಆಲೂರು

ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಬೆಂಗಳೂರು ವತಿಯಿಂದ ಕೊಡುವ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು, ತಾಲೂಕಿನ ಮಡಬಲು ಗ್ರಾಮದ ನಿವಾಸಿ ಶಿಕ್ಷಕ ಹಾಗು ಸಾಹಿತಿ ಎಂ. ಜಿ. ಪರಮೇಶ್ ರವರಿಗೆ ಆ. ೩೧ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಎಂ. ವಿ. ತ್ಯಾಗರಾಜ್ ತಿಳಿಸಿದ್ದಾರೆ. ಸದ್ಯ ಇವರು ಹೊಳೆನರಸೀಪುರ ತಾಲೂಕು ಬಿ.ಆರ್.ಸಿ. ಕೇಂದ್ರದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪರಮೇಶ್ ವೃತ್ತಿಯಲ್ಲಿ ಶಿಕ್ಷಕರಾಗಿ ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯದ ಹವ್ಯಾಸವನ್ನು ಮೈಗೂಡಿಸಿಕೊಂಡಿದ್ದು,, ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಲೇಖನಗಳು, ವೈಜ್ಞಾನಿಕ ಲೇಖನಗಳು, ವಿಮರ್ಶಾ ಲೇಖನಗಳು, ಕಥೆ, ಕವಿತೆಗಳನ್ನು ಬರೆದಿದ್ದಾರೆ. ಈಗಾಗಲೇ ಎಂಟು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ. ಶಿಕ್ಷಣ ಇಲಾಖೆಯ ಹಲವು ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಶೈಕ್ಷಣಿಕ ಹಾಗೂ ಸಾಹಿತ್ಯಾತ್ಮಕ ಕಾರ್ಯವನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.