ಮಾಡಾಳು ಪುತ್ರ ಮಲ್ಲಿಕಾರ್ಜುನ್ ಬಿಜೆಪಿ ಸೇರ್ಪಡೆ

| Published : Feb 08 2024, 01:33 AM IST

ಸಾರಾಂಶ

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಾಡಾಳು ಮಲ್ಲಿಕಾರ್ಜುನ್ ಬುಧವಾರ ಬೆಂಗಳೂರಿನ ಬಿಜೆಪಿ ಪಕ್ಷದ ಕಛೇರಿಯಲ್ಲಿ ಇವರ ಸಾವಿರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.

ಕನ್ನಡಪ್ರಭವಾರ್ತೆ ಚನ್ನಗಿರಿ

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಇವರ ಪುತ್ರ ಮಾಡಾಳು ಮಲ್ಲಿಕಾರ್ಜುನ್ ಬುಧವಾರ ಬೆಂಗಳೂರಿನ ಬಿಜೆಪಿ ಪಕ್ಷದ ಕಛೇರಿಯಲ್ಲಿ ಇವರ ಸಾವಿರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.

ಕಳೆದ 11 ತಿಂಗಳ ಹಿಂದೆ ಬಿಜೆಪಿ ಪಕ್ಷದಲ್ಲಿದ್ದ ಮಾಡಾಳು ಮಲ್ಲಿಕಾರ್ಜುನ್ ಇವರನ್ನು ಕೆಲ ರಾಜಕೀಯ ಕಾರಣಾಂತರಗಳಿಂದ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು ಪ್ರಸ್ತುತವಾಗಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜೇಂದ್ರ ಮತ್ತು ಮಾಜಿ ಮುಖ್ಯ ಮುಂತ್ರಿ ಬಿ.ಎಸ್.ಯಡಿಯೂರಪ್ಪ ಇವರ ಅಭಿಲಾಷೆಯ ಮೇರೆಗೆ ಪಕ್ಷಕ್ಕೆ ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಸೇರ್ಪಡೆಗೊಂಡರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಡಾಳು ಮಲ್ಲಿಕಾರ್ಜುನ್ ಇವರಿಗೆ ಕೊನೆಯ ಕ್ಷಣದಲ್ಲಿ ಪಕ್ಷದಿಂದ ಟಿಕೇಟ್ ನೀಡದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿ 64 ಸಾವಿರ ಮತಗಳನ್ನು ಮಡೆದು ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದರು ಪ್ರಸ್ತುತ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದರಿಂದ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಬಲ ಬಂದಂತಾಗಿದೆ.ಈ ಸಂದರ್ಭದಲ್ಲಿ ಮಾಡಾಳು ಮಲ್ಲಿಕಾರ್ಜುನ್ ಮಾತನಾಡಿ, ಕಳೆದ 11 ತಿಂಗಳಿನಿಂದ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಮುದುಡಿತ್ತು ಇನ್ನು ಮುಂದೆ ಬಿಜೆಪಿ ಪಕ್ಷವನ್ನು ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಜ್ವಲಿಸುವಂತೆ ಮಾಡುತ್ತೇನೆ ಎಂದು ತಿಳಿಸುತ್ತಾ ಜಿಲ್ಲೆಯ ಮತದಾರರ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ಈಗಾಗಲೇ ಮನವರಿಕೆ ಮಾಡಿಕೊಟ್ಟಿದ್ದು ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಯಾರಿಗೆ ಟಿಕೇಟ್ ನೀಡಿದರು ಅವರನ್ನು ಗೆಲ್ಲಿಸಿ ನರೇಂದ್ರಮೋದಿ ಅವರ ಕೈಯನ್ನು ಬಲ ಪಡಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ಮಾಜಿ ಮಂತ್ರಿಗಳಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಗುರುಸಿದ್ದನಗೌಡ, ಮಾಡಾಳು ವಿರೂಪಾಕ್ಷಪ್ಪ, ಬಸವರಾಜನಾಯ್ಕ್ ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜ್ ಸೇರಿದಂತೆ ಮೊದಲಾದವರು ಹಾಜರಿದ್ದರು.