ಮದರಾ(ಬಿ) ಮತಗಟ್ಟೆಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

| Published : Mar 19 2024, 12:50 AM IST

ಮದರಾ(ಬಿ) ಮತಗಟ್ಟೆಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭೆ ಚುನಾವಣೆ ಹಿನ್ನೆಲೆ ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳಿರುವಂತೆ ನೋಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚವಡಾಪುರ

ಲೋಕಸಭೆ ಚುನಾವಣೆ ಹಿನ್ನೆಲೆ ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳಿರುವಂತೆ ನೋಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ತಿಳಿಸಿದರು.

ಅಫಜಲ್ಪುರ ತಾಲೂಕಿನ ಮದರಾ(ಬಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು ಲೋಕಸಭೆ ಚುನಾವಣೆಯಲ್ಲಿ ಮತದಾರರು ಯಾವುದೇ ಆತಂಕವಿಲ್ಲದೆ ಬಂದು ಮತದಾನ ಮಾಡುವಂತಾಗಬೇಕು. ಹಿರಿಯ ಮತದಾರರಿಗಾಗಿ ವ್ಹಿಲ್ ಚೇರ್ ವ್ಯವಸ್ಥೆ ಮಾಡಿ, ಮಹಿಳಾ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಎಲ್ಲವನ್ನು ಮಾಡಿಕೊಳ್ಳಿ ಎಂದ ಅವರು ಎಲ್ಲರೂ ಸೇರಿ ಸಾರ್ವತ್ರಿಕ ಚುನಾವಣೆಯನ್ನು ಯಶಸ್ವಿಗೊಳಿಸೋಣ ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಸಿಇಒ ಭಂವರಸಿಂಗ್ ಮೀನಾ, ತಹಸೀಲ್ದಾರ ಸಂಜೀವಕುಮಾರ ದಾಸರ್, ಪಿಡಿಒ ವಿದ್ಯಾಧರ ಕಾಂಬಳೆ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.