ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳು ಚಿತ್ರದುರ್ಗದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಹರಳಯ್ಯ ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು.

ಈ ವೇಳೆ ಆಸ್ಪತ್ರೆಯ ವೈದ್ಯರಿಂದ ಹರಳಯ್ಯ ಸ್ವಾಮೀಜಿಯವರ ಆರೋಗ್ಯ ಸ್ಥಿತಿಯ ಕುರಿತು ಸಮಗ್ರ ಮಾಹಿತಿ ಪಡೆದ ಮಾದಾರ ಚೆನ್ನಯ್ಯ ಶ್ರೀಗಳು, ಅಗತ್ಯವಿರುವ ಉತ್ತಮ ಚಿಕಿತ್ಸೆಯನ್ನು ಒದಗಿಸುವಂತೆ ವೈದ್ಯರಿಗೆ ಸೂಚಿಸಿದರು.

ಘಟನೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಪ್ರಕರಣದ ಬಗ್ಗೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.