ಮಂಡ್ಯ ಜಿಲ್ಲೆಯ ಗಡಿಭಾಗಕ್ಕೆ ಬೆಳಗ್ಗೆ ಆಗಮಿಸಿದ್ದ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಮುಖಂಡ ಕೂಳೆಗೆರೆಳೆ ಶೇಖರ್ ಸೇರಿದಂತೆ ಅನೇಕ ಮುಖಂಡರು ಮೈಸೂರು ಪೇಟ ತೊಡಿಸಿ ಮಾಲಾರ್ಪಣೆ ಮಾಡುವ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ಹುಟ್ಟುಹಬ್ಬವನ್ನು ಅವರ ಸಮ್ಮುಖದಲ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಮಂಗಳವಾರ ಅದ್ಧೂರಿಯಾಗಿ ಆಚರಿಸಿದರು.

ಬೆಂಗಳೂರಿನಿಂದ ಪಟ್ಟಣದ ಪ್ರವಾಸಿ ಮಂದಿರಕ್ಕೆ ಬೆಳಗ್ಗೆ ಆಗಮಿಸಿದ ಸಚಿವ ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬೃಹತ್ ಗಾತ್ರದ ಹಾರ ಹಾಕಿ ಹೂಮಳೆಗೆರೆದು ಸಂಭ್ರಮದ ಸ್ವಾಗತ ನೀಡಿದರು.

ನಂತರ ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರ, ರಾಜ್ಯ ಸಂಘಟನಾ ಸಂಚಾಲಕ ಬಿಳಿಯಪ್ಪ, ರಾಜ್ಯ ಉಪಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ ಹಾಗೂ ಮಹಿಳಾ ಘಟಕದ ಅಧ್ಯಕ್ಷ ದಿವ್ಯ ರಾಮಚಂದ್ರ ಶೆಟ್ಟಿ ಸೇರಿದಂತೆ ಅನೇಕ ಮುಖಂಡರು ಸಚಿವ ಕುಮಾರಸ್ವಾಮಿ ಅವರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.

ನಂತರ ನೆರೆದಿದ್ದ ಅಸಂಖ್ಯಾತ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಕುಮಾರಸ್ವಾಮಿ ಕೇಕ್ ಕತ್ತರಿಸುವ ಮೂಲಕ ತಮ್ಮ 66ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.

ಇದಕ್ಕೂ ಮುನ್ನ ಜಿಲ್ಲೆಯ ಗಡಿಭಾಗಕ್ಕೆ ಬೆಳಗ್ಗೆ ಆಗಮಿಸಿದ್ದ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಮುಖಂಡ ಕೂಳೆಗೆರೆಳೆ ಶೇಖರ್ ಸೇರಿದಂತೆ ಅನೇಕ ಮುಖಂಡರು ಮೈಸೂರು ಪೇಟ ತೊಡಿಸಿ ಮಾಲಾರ್ಪಣೆ ಮಾಡುವ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಕೆ.ಟಿ.ರಾಜಣ್ಣ, ಪುರಸಭೆ ಮಾಜಿ ಸದಸ್ಯರಾದ ಮಹೇಶ, ಎಂ.ಐ.ಪ್ರವೀಣ, ಹನುಮಂತೇಗೌಡ, ಬ್ಯಾಡರಹಳ್ಳಿ ರಾಮಕೃಷ್ಣ, ಕೆಂಗಲ್ ಗೌಡ, ಗುರುದೇವರಹಳ್ಳಿ ಅರವಿಂದ, ಅಪ್ಪು ಪಿ.ಗೌಡ, ತೋಪ್ಪನಹಳ್ಳಿ ಮಹೇಂದ್ರ, ಹೊಸಕೆರೆ ದಯಾನಂದ, ಕೆ.ಟಿ.ಸುರೇಶ ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.