ಮದ್ದೂರು ಕಲ್ಲು ತೂರಾಟ ಪ್ರಕರಣ: ಮೊದಲ ವಿಕೆಟ್ ಪತನ

| Published : Sep 13 2025, 02:04 AM IST

ಸಾರಾಂಶ

ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಸರ್ಕಲ್ ಇನ್ಸ್ ಪೆಕ್ಟರ್ ಎಚ್.ಶಿವಕುಮಾರ್ ಅವರನ್ನು ಅಮಾನತ್ತು ಮಾಡಿ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಸರ್ಕಲ್ ಇನ್ಸ್ ಪೆಕ್ಟರ್ ಎಚ್.ಶಿವಕುಮಾರ್ ಅವರನ್ನು ಅಮಾನತ್ತು ಮಾಡಿ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

ಶಿವಕುಮಾರ್ ಅವರ ಅಮಾನತ್ತಿನಿಂದಾಗಿ ಘಟನೆಗೆ ಪೊಲೀಸ್ ಇಲಾಖೆಯ ಮೊದಲ ವಿಕೆಟ್ ಪತನವಾದಂತಾಗಿದೆ. ರಾಮ್ ರಹೀಮ್ ನಗರದಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಸ್ಥಳದಲ್ಲಿ ಇರದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ಮುಸ್ಲಿಂ ಮತ್ತು ಹಿಂದೂಗಳ ಗಲಾಟೆಯಾಗಿದ್ದು, ಇದರಿಂದ ಶಿವಕುಮಾರ್ ಅವರನ್ನು ಐಜಿಪಿ ಅಮಾನತ್ತು ಮಾಡಿದ್ದಾರೆ ಎಂದು ಹೇಳಲಾಗಿದೆ.

ಶಿವಕುಮಾರ್ ಅಮಾನತ್ತು ಖಂಡಿಸಿ ಇಂದು ಸ್ಥಳೀಯರ ಪ್ರತಿಭಟನೆ

ಮದ್ದೂರು: ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ಅಮಾನತ್ತು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಸೆ.13 ರಂದು ಪಟ್ಟಣದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಮದ್ದೂರು ಗಲಭೆ ಪ್ರಕರಣದಲ್ಲಿ ನಿಷ್ಠಾವಂತ ಅಧಿಕಾರಿಯನ್ನು ಅಮಾನತ್ತು ಮಾಡಿರುವುದು ಸರಿಯಲ್ಲ. ಕೂಡಲೇ ಸರ್ಕಾರ ಅಮಾನತ್ತು ಆದೇಶವನ್ನು ಹಿಂಪಡೆಯಬೇಕು ಅಗ್ರಹಿಸಿ ಅಂದು ಮಧ್ಯಾಹ್ನ 12 ಗಂಟೆಗೆ ಸ್ಥಳೀಯರು, ಸಾರ್ವಜನಿಕರು, ಹೋರಾಟಗಾರರು ಪ್ರತಿಭಟನೆ ನಡೆಸಲಿದ್ದಾರೆ.ಶಾಸಕ ಯತ್ನಾಳ್ ಗೆ ಅದ್ಧೂರಿ ಸ್ವಾಗತ

ಶ್ರೀರಂಗಪಟ್ಟಣಮೈಸೂರಿಗೆ ತೆರಳುವ ಮುನ್ನ ಪಟ್ಟಣಕ್ಕೆ ಭೇಟಿ ನೀಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯುವಕರು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿ ಸನ್ಮಾನಿಸಿದರು.

ಪಟ್ಟಣದ ಲಕ್ಷ್ಮಿದೇವಿ ಯುವಕರ ಬಳಗದ ಪ್ರತಿಸ್ಥಾಪಿಸಲಾಗಿದ್ದ ಗಣಪತಿ ಹಾಗೂ ಶ್ರೀ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಯತ್ನಾಳ್ ವಿಶೇಷ ಪೂಜೆ ಸಲ್ಲಿದರು. ಬಳಿಕ ಯತ್ನಾಳ್ ಅವರನ್ನು ಯುವಕರು, ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಹರ್ಷ, ವರುಣ್, ಶಂಕರ್, ಶಿವು, ಸನಾತ್, ಚೇತನ್, ನಯನ್, ಶರತ್, ಅಭಿ, ಯತೀಶ್, ಹಿರಿಯ ಮುಖಂಡರಾದ ಕಿರಣ್, ಸುಧಾಕರ್, ಸುನಿಲ್, ವಿಶ್ವನಾಥ್ ಸೇರಿದಂತೆ ಇತರರು ಇದ್ದರು.7 ಮಂದಿ ಆರೋಪಿಗಳು ಪೊಲೀಸರ ವಶಕ್ಕೆ, ಘಟನಾ ಸ್ಥಳ ಮಹಜರು

ಕನ್ನಡಪ್ರಭ ವಾರ್ತೆ ಮದ್ದೂರು

ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ 22 ಮಂದಿ ಆರೋಪಿಗಳ ಪೈಕಿ 7 ಮಂದಿಯನ್ನು ಶುಕ್ರವಾರ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡು ಘಟನಾ ಸ್ಥಳದ ಮಹಜರು ನಡೆಸಿದರು.

ಆರೋಪಿಗಳಾದ ಅಹಮದ್ ಸಲ್ಮಾನ್, ಹವೇಜ್, ಖಲೀಮ್, ಇಮ್ರಾನ್ ಖಾನ್, ಸಾಧಿಕ್ ಉಲ್ಲಾ , ಇರ್ಫಾನ್ ಹಾಗೂ ಇನ್ನಾಯತ್ ಅವರುಗಳನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಆರೋಪಿಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಯಿತು.