ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರ 60ನೇ ವರ್ಷದ ಹುಟ್ಟುಹಬ್ಬ

| Published : Dec 25 2024, 12:46 AM IST

ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರ 60ನೇ ವರ್ಷದ ಹುಟ್ಟುಹಬ್ಬ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತೀನಗರದ ಚಾಂಶುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ, ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ, ಕಾರ್ಕಹಳ್ಳಿ ಶ್ರೀ ಬಸವೇಶ್ವರ, ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ದೇವಾಲದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನ ವಿವಿಧ ಅಂಗಸಂಸ್ಥೆ ಭೋಧಕ, ಭೋಧಕೇತರರು ಮತ್ತು ಮಧು ಜಿ.ಮಾದೇಗೌಡ ಅಭಿಮಾನಿ ಬಳಗದ ವತಿಯಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಭಾರತೀ ಎಜುಕೇಷನ್ ಟ್ರಸ್ಟ್ ಚೇರ್‍ಮನ್, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರ 60 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದವು.

ಭಾರತೀನಗರದ ಚಾಂಶುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ, ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ, ಕಾರ್ಕಹಳ್ಳಿ ಶ್ರೀ ಬಸವೇಶ್ವರ, ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ದೇವಾಲದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನ ವಿವಿಧ ಅಂಗಸಂಸ್ಥೆ ಭೋಧಕ, ಭೋಧಕೇತರರು ಮತ್ತು ಮಧು ಜಿ.ಮಾದೇಗೌಡ ಅಭಿಮಾನಿ ಬಳಗದ ವತಿಯಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು.

ಈ ವೇಳೆ ವಿಧಾನ ಪರಿಷತ್ ಮಧು ಜಿ.ಮಾದೇಗೌಡ ಅವರನ್ನು ಅಭಿಮಾನಿಗಳು ಸೇರಿದಂತೆ ಟ್ರಸ್ಟ್ ಅಂಗ ಸಂಸ್ಥೆಯಿಂದ ಅಭಿನಂದಿಸಲಾಯಿತು. ಬಳಿಕ ಮಾತನಾಡಿದ ಅವರು, ನನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳು ಈ ಬಾರಿ ವಿಶೇಷವಾಗಿ ಸಾಮಾಜಿಕ ಚಟುವಟಿಕೆಗಳನ್ನು ಮಾಡುವ ಮೂಲಕ ಐದು ದಿನಗಳು ಆಚರಿಸುತ್ತಿರುವುದು ಸಮಾಜ ಮುಖಿ ಕೆಲಸವಾಗಿದೆ ಎಂದು ಶ್ಲಾಘಿಸಿದರು.

ಈ ಬಾರಿ ಹುಟ್ಟುಹಬ್ಬದಲ್ಲಿ ರಕ್ತದಾನ, ಆರೋಗ್ಯ ಶಿಬಿರ, ಕ್ರೀಡಾಕೂಟ, ಉದ್ಯೋಗ ಮೇಳ ಮತ್ತು ದಕ್ಷೀಣ ಪದವಿಧರ ಕ್ಷೇತ್ರ ಒಳಪಡುವ ಎಲ್ಲ ಜಿಲ್ಲೆಗಳಲ್ಲಿ ಅನಾಥಶ್ರಮ, ವೃದ್ದಾಶ್ರಮಗಳಿಗೆ ಆಹಾರ ಮತ್ತು ಬಟ್ಟೆಗಳ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮವನ್ನು ಅಭಿಮಾನಿಗಳು ಹಮ್ಮಿ ಕೊಂಡಿರುವುದು ಸಂತಸದ ವಿಚಾರ ಎಂದರು.

ನನ್ನ ತಂದೆ ಮಾಜಿ ಸಂಸದ ಜಿ.ಮಾದೇಗೌಡರು ಹಳ್ಳಿಗಾಡಿನ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಕೆ.ಎಂ.ದೊಡ್ಡಿ ಕುಗ್ರಾಮದಲ್ಲಿ ಶಿಕ್ಷಣ ಸಂಸ್ಥೆ ತೆರೆದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ. ಅವರು ಹಾಕಿ ಕೊಟ್ಟಿರುವ ಮಾರ್ಗದಲ್ಲಿ ನಡೆಯುತ್ತ ಸಾವಿರಾರು ಜನರಿಗೆ ಉದ್ಯೋಗ ಸೃಷ್ಟಿಸಿ ತಂದೆ ಆಸೆಯನ್ನು ನೆರವೇರಿಸುತ್ತಿದ್ದೇನೆ ಎಂದು ಭರವಸೆ ನೀಡಿದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ತೆರಳಿ ದುಬಾರಿ ಹಣ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಅರಿತು ಹಲವು ಹೊಸ ಕೋರ್ಸ್‌ಗಳನ್ನು ಆರಂಭಿಸಿದ್ದು, ಇನ್ನು ಹೆಚ್ಚಿನ ಪ್ರಗತಿ ಸಾಧಿಸಲು ನಿಮ್ಮೆಲ್ಲರ ಸಹಕಾರ ಮುಖ್ಯ ಎಂದರು.

ಮಾಜಿ ಸಂಸದ ಜಿ.ಮಾದೇಗೌಡ ಸ್ಥಾಪಿಸಿದ ಹನುಮಂತನಗರದ ಶ್ರೀಆತ್ಮಲಿಂಗೇಶ್ವರ ದೇವಾಲಯದಲ್ಲಿ ಭಾರತೀ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ, ಶ್ರೀ ಚಾಮುಂಡೇಶ್ವರಿ ಭಾರತೀ ಪಿಯು ಅಕಾಡೆಮಿ ಆಫ್ ಎಕ್ಸ್‌ಲೆನ್ ಸಿಬ್ಬಂದಿ, ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರದಲ್ಲಿ ಬಿಇಟಿ ಪಾಲಿಟೆಕ್ನಿಕ್ ಸಿಬ್ಬಂದಿ, ಕಾರ್ಕಹಳ್ಳಿ ಶ್ರೀ ಬಸವೇಶ್ವರ ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ವೇಳೆ ತಾಪಂ ಮಾಜಿ ಸದಸ್ಯ ಬಿ.ಗಿರೀಶ್, ಸೊಸೈಟಿ ಮಾಜಿ ಅಧ್ಯಕ್ಷ ಅಣ್ಣೂರು ಸಿದ್ದಪ್ಪ, ಗ್ರಾಪಂ ಅಧ್ಯಕ್ಷೆ ಸೌಭಾಗ್ಯ, ಮಾಜಿ ಅಧ್ಯಕ್ಷರಾದ ಎಂ.ಪಿ.ರವಿಚಂದ್ರ, ವಕ್ರತುಂಡ ವೆಂಕಟೇಶ್, ಸದಸ್ಯರಾಸ ಕೆ.ಟಿ.ಶ್ರೀನಿವಾಸ್, ಕೆ.ವಿ.ಶ್ರೀನಿವಾಸ್, ಪುಟ್ಟರಾಮು, ಮೆಳ್ಳಹಳ್ಳಿ ವಿನಯ್ ಹೊನ್ನೇಗೌಡ, ಮಿಥುನ್, ಮುಖಂಡರಾದ ಕಾರ್ಕಹಳ್ಳಿ ಸ್ವರೂಪ್ ಬಸವೇಗೌಡ, ಕಳ್ಳಿಮೆಳ್ಳೆದೊಡ್ಡಿ ಪ್ರಸನ್ನಕುಮಾರ್ ಸೇರಿದಂತೆ ಹಲವರಿದ್ದರು.

ಕಾರ್ಕಹಳ್ಳಿ ಶ್ರೀಬಸವೇಶ್ವರ ದೇವಾಲಯ ಅಭಿವೃದ್ಧಿಗೆ ನನ್ನ ಅನುದಾನದಿಂದ 15 ಲಕ್ಷ ಹಣ ನೀಡಿದ್ದು ಮುಂದಿನ ದಿನಗಳಲ್ಲಿ ದೇವಾಲಯ ಗೋಪುರ ನಿರ್ಮಾಣ ಮಾಡಲು ಶ್ರಮಿಸುತ್ತೇನೆ. ಅಲ್ಲದೇ, ಗ್ರಾಮದ ಸರ್ವೊತೋಮುಖ ಅಭಿವೃದ್ದಿಗೆ ಗ್ರಾಮಸ್ಥರಿಗೆ ನೆರವಾಗುತ್ತೇನೆ. ಗ್ರಾಮಕ್ಕೆ ಐತಿಹಾಸಿಕ ಹಿನ್ನೆಲೆ ಇದ್ದು ಅದನ್ನು ಉಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

- ಮಧು ಜಿ.ಮಾದೇಗೌಡ, ವಿಧಾನ ಪರಿಷತ್ ಸದಸ್ಯರು