ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಉಳಿವಿಗಾಗಿ ಹೋರಾಟಗಾರ ನಡೆಸಿದ ಮಾಜಿ ಸಂಸದ ಜಿ.ಮಾದೇಗೌಡರ ಸುಪುತ್ರ ಎಂಎಲ್‌ಸಿ ಮಧು ಜಿ.ಮಾದೇಗೌಡರ ಹುಟ್ಟುಹಬ್ಬದ ಅಂಗವಾಗಿ ಎಲ್ಲಾ ಕಾಂಗ್ರೆಸ್ ಮುಖಂಡರು ಸೇರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಸಾರ್ವಜನಿಕ ಉಪವಿಭಾಗೀಯ ಆಸ್ಪತ್ರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಮನ್ಮುಲ್ ಮಾಜಿ ನಿರ್ದೇಶಕ ಎಲ್.ಸಿ.ಮಂಜುನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದರು.ಎಲ್.ಸಿ.ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಕಾವೇರಿ ಉಳಿವಿಗಾಗಿ ಹೋರಾಟಗಾರ ನಡೆಸಿದ ಮಾಜಿ ಸಂಸದ ಜಿ.ಮಾದೇಗೌಡರ ಸುಪುತ್ರ ಎಂಎಲ್‌ಸಿ ಮಧು ಜಿ.ಮಾದೇಗೌಡರ ಹುಟ್ಟುಹಬ್ಬದ ಅಂಗವಾಗಿ ಎಲ್ಲಾ ಕಾಂಗ್ರೆಸ್ ಮುಖಂಡರು ಸೇರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ ಎಂದರು.
ಮಧು ಜಿ.ಮಾದೇಗೌಡರು ಜನ ಸಾಮಾನ್ಯರೊಂದಿಗೆ ಸ್ಪಂದಿಸಿ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ಕೆಲಸ ಮಾಡುವ ಮೂಲಕ ತಂದೆ ಹಾದಿಯಲ್ಲಿಯೇ ನಡೆಯುತ್ತಿದ್ದಾರೆ. ಇಂತಹ ನಾಯಕರಿಗೆ ಮುಂದೆ ಮತ್ತಷ್ಟು ದೊಡ್ಡ ರಾಜಕೀಯ ಸ್ಥಾನಮಾನಗಳು ದೊರೆಯುವಂತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಮಾಡಲೆಂದು ಹಾರೈಸಿದರು.ಈ ವೇಳೆ ಕಾಂಗ್ರೆಸ್ ಮುಖಂಡರಾದ ಡಾ.ಮಾಯಿಗೌಡ, ಆರ್.ಎ.ನಾಗಣ್ಣ, ಅಮೃತಿ ರಾಜಶೇಖರ್, ಕೆ.ಮಂಜುನಾಥ್, ಚಿಕ್ಕಾಡೆ ಮಹೇಶ್, ದೀಪು, ಎನ್.ರಾಮೇಗೌಡ, ದೇವರಾಜು, ರಮೇಶ್, ಸಿದ್ದಲಿಂಗಯ್ಯ, ಮಾಲತಿ, ಕಣಿವೆರಾಮು, ದೊಡ್ಡವೆಂಕಟಯ್ಯ, ಕಣಿವೆ ವಿಶ್ವೇಶ್ವರ, ವೈದ್ಯಾಧಿಕಾರಿ ಡಾ.ಅರವಿಂದ್ ಸೇರಿದಂತೆ ಹಲವರು ಇದ್ದರು.
30ರಂದು ಶ್ರೀಅನಂತಪದ್ಮನಾಭ ಸ್ವಾಮಿ ವೈಕುಂಠ ಏಕಾದಶಿಮಂಡ್ಯ: ತಾಲೂಕಿನ ಹೊಸಬೂದನೂರು ಗ್ರಾಮದಲ್ಲಿ ಹೊಯ್ಸಳರ 3ನೇ ವೀರಬಲ್ಲಾಳ ನಿರ್ಮಿಸಿರುವ ಇತಿಹಾಸ ಪ್ರಸಿದ್ಧ ಶ್ರೀ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿವೈಕುಂಠ ಏಕಾದಶಿ ಮಹೋತ್ಸವವನ್ನು ಡಿ.30 ರಂದು ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ವೈಕುಂಠ ದ್ವಾರ ಪ್ರವೇಶ ನಡೆಯಲಿದೆ. ಪ್ರಾತಃಕಾಲ ಮಹಾಭಿಷೇಕ, ಹೋಮ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 6 ರಿಂದ ರಾತ್ರಿ 10ರವರೆಗೆ ಅನ್ನಸಂತರ್ಪಣೆ ನಡೆಯಲಿದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಸ್ಥಾನ ಟ್ರಸ್ಟಿಗಳು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.